ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ಆರೋಗ್ಯ ಸಚಿವೆಗೆ ಕೊರೊನಾ ವೈರಸ್‌ ಸೋಂಕು

Last Updated 11 ಮಾರ್ಚ್ 2020, 3:30 IST
ಅಕ್ಷರ ಗಾತ್ರ

ಲಂಡನ್‌: ಬ್ರಿಟನ್‌ ಆರೋಗ್ಯ ಖಾತೆ ಸಚಿವೆನಡೈನ್‌ ಡೋರಿಸ್‌ (62) ಕೊರೊನಾ ವೈರಸ್‌ ಸೋಂಕಿತರಾಗಿದ್ದಾರೆ. ಕೊರೊನಾ ವೈರಸ್‌ ಪರೀಕ್ಷೆಯಲ್ಲಿ ಫಲಿತಾಂಶ ಪಾಸಿಟಿವ್‌ ಬಂದಿರುವುದಾಗಿ ಮಂಗಳವಾರ ಪ್ರಕಟಿಸಿದ್ದಾರೆ.

'ಪರೀಕ್ಷೆಗಳಿಂದ ಕೊರೊನಾ ವೈರಸ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಸೋಂಕು ಇರುವುದನ್ನು ಖಚಿತಪಡಿಸುತ್ತಿದ್ದೇನೆ...ಹಾಗೂ ನಾನು ಮನೆಯಲ್ಲಿಯೇ ಇದ್ದು ಸೋಂಕು ಹರಡದಂತೆ ಎಚ್ಚರವಹಿಸಿದ್ದೇನೆ' ಎಂದು ಕನ್ಸರ್ವೆಟಿವ್‌ ಪಕ್ಷದ ಸಂಸದೆ ಡೋರಿಸ್‌ ಹೇಳಿದ್ದಾರೆ.

ಸಚಿವೆಗೆ ಎಲ್ಲಿಂದ ಕೊರೊನಾ ವೈರಸ್‌ ಸೋಂಕು ತಗುಲಿದೆಮತ್ತು ಅವರು ಯಾರೊಂದಿಗೆಲ್ಲ ಸಂಪರ್ಕದಲ್ಲಿದ್ದರು ಎಂಬುದನ್ನು ಆರೋಗ್ಯ ಅಧಿಕಾರಿಗಳು ಪತ್ತೆ ಮಾಡುವ ಪ್ರಯತ್ನದಲ್ಲಿದ್ದಾರೆ.

ಬ್ರಿಟನ್‌ನಲ್ಲಿ ಈವರೆಗೂ 370ಕ್ಕೂ ಹೆಚ್ಚು ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಸಾವಿಗೀಡಾಗಿದ್ದಾರೆ.

ಡೋರಿಸ್‌, ಕೋವಿಡ್‌–19 ದೃಢಪಟ್ಟಿರುವ ಮೊದಲ ಬ್ರಿಟಿಷ್‌ ರಾಜಕಾರಣಿ. ದಿ ಟೈಮ್ಸ್‌ ಪ್ರಕಾರ, ಸಚಿವೆ ಡೋರಿಸ್‌ ಇತ್ತೀಚೆಗೆ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೇರಿದಂತೆ ನೂರಾರು ಜನರನ್ನು ಭೇಟಿ ಮಾಡಿದ್ದಾರೆ.

ಕಂಪನಿಗಳು ಕೊರೊನಾ ವೈರಸ್‌ ಸೋಂಕಿತರಿಗೆ ಚಿಕಿತ್ಸೆಗಾಗಿ ವಿಮೆ ಸೌಲಭ್ಯ ನೀಡುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕಡತಗಳಿಗೆ ಸಹಿ ಹಾಕುವ ಸಂದರ್ಭದಲ್ಲಿ ಡೋರಿಸ್‌ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ವರದಿಯಾಗಿದೆ.

ಹಣಕಾಸು ಸಚಿವ ರಿಷಿ ಸುನಕ್‌ ಅವರು ಬುಧವಾರ ಬಜೆಟ್‌ ಮಂಡಿಸಲಿದ್ದಾರೆ. ಕೊರೊನಾ ವೈರಸ್‌ನಿಂದ ಆರ್ಥಿಕತೆಯ ಮೇಲೆ ಆಗುತ್ತಿರುವ ಪರಿಣಾಮವನ್ನು ತಗ್ಗಿಸಲು ಹಲವು ಕ್ರಮಗಳ ಬಗ್ಗೆ ಬಜೆಟ್‌ನಲ್ಲಿ ನಿರೀಕ್ಷಿಸಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಸೇವೆಗೆ ಅಗತ್ಯವಿರುವ ಸಕಲ ನೆರವು ನೀಡುವುದಾಗಿ ಘೋಷಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT