ಗುರುವಾರ , ಫೆಬ್ರವರಿ 25, 2021
31 °C

ಉಗ್ರರಿಗೆ ಹಣಕಾಸು ನೆರವಿಗೆ ಕಡಿವಾಣ: ಪಾಕಿಸ್ತಾನಕ್ಕೆ ಅಮೆರಿಕ ಬೆಂಬಲ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಭಯೋತ್ಪಾದಕರಿಗೆ ಹಣಕಾಸು ನೆರವು ಸಿಗದಂತೆ ತಡೆಯಲು ಅಂತರರಾಷ್ಟ್ರೀಯ ಸಮುದಾಯದ ಸೂಚನೆಗಳನ್ನು ಪಾಲಿಸುವಂತೆ ಪಾಕಿಸ್ತಾನಕ್ಕೆ ಅಮೆರಿಕ ಸೂಚಿಸಿದೆ. 

ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅಮೆರಿಕ ಪ್ರವಾಸ ಸಂದರ್ಭದಲ್ಲಿ ಈ ಸೂಚನೆಯನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಇತ್ತೀಚೆಗಷ್ಟೇ ಹಣಕಾಸು ನಿಗ್ರಹ ಕಾರ್ಯಪಡೆಗೆ(ಎಫ್‌ಎಟಿಎಫ್‌) ಪಾಕಿಸ್ತಾನ ಕ್ರಿಯಾಯೋಜನೆ ಸಲ್ಲಿಸಿದೆ. ಇದರ ಅನುಷ್ಠಾನಕ್ಕೆ ಪಾಕಿಸ್ತಾನ ಸಿದ್ಧತೆ ನಡೆಸುತ್ತಿದ್ದು, ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ವಿದೇಶಾಂಗ ಸಚಿವ ಮೈಕ್‌ ಪಾಂಪಿಯೊ ಜತೆ ನಡೆದ ಸಭೆ ವೇಳೆ ಈ ವಿಷಯ ಚರ್ಚೆಯಾಗಿದೆ. ಕ್ರಿಯಾಯೋಜನೆ ಅನುಷ್ಠಾನಕ್ಕೆ ಬೆಂಬಲ ನೀಡಲು ಅಮೆರಿಕ ಸಿದ್ಧವಾಗಿದೆ. ಪಾಕಿಸ್ತಾನದ ಭವಿಷ್ಯದ ದೃಷ್ಟಿಯಿಂದ ಎಲ್ಲ ಉಗ್ರ ಸಂಘಟನೆಗಳಿಗೆ ಕಡಿವಾಣ ಹಾಕುತ್ತೇವೆ ಎನ್ನುವ ಇಮ್ರಾನ್‌ ಖಾನ್‌ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ’ ಎಂದರು. 

ಭಯೋತ್ಪಾದಕರಿಗೆ ಹಣಕಾಸು ನೆರವು ನಿಗ್ರಹಿಸುವಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಅಕ್ಟೋಬರ್  ಒಳಗಾಗಿ ಕ್ರಿಯಾಯೋಜನೆ ಅನುಷ್ಠಾನಗೊಳಿಸದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಜೂನ್‌ನಲ್ಲಿ ಪ್ಯಾರಿಸ್‌ ಮೂಲದ ಜಾಗತಿಕ ಅಕ್ರಮ ಹಣ ವರ್ಗಾವಣೆ ಕಣ್ಗಾವಲು ಸಂಸ್ಥೆಯೊಂದು ತಿಳಿಸಿತ್ತು. ಭಯೋತ್ಪಾದಕ ಸಂಘಟನೆಗಳಿಗೆ ಹಣ ಪೂರೈಕೆಯಾಗುವುದಕ್ಕೆ ಕಡಿವಾಣ ಹಾಕುವಲ್ಲಿ ವಿಫಲಗೊಂಡಿದ್ದ ಕಾರಣ ಪಾಕಿಸ್ತಾನವನ್ನು ಎಫ್‌ಎಟಿಎಫ್‌ ಬೂದುಪಟ್ಟಿಯಲ್ಲಿಟ್ಟಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು