ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ, ಚೀನಾ ಗಡಿ ಸಂಘರ್ಷ: ಶಾಂತಿಯುತವಾಗಿ ಪರಿಹಾರವಾಗಲಿದೆ –ಅಮೆರಿಕ ವಿಶ್ವಾಸ

Last Updated 17 ಜೂನ್ 2020, 2:03 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವಿನ ಗಡಿ ರೇಖೆಯಲ್ಲಿ ಉಂಟಾಗಿರುವ ವಿಷಮ ಪರಿಸ್ಥಿತಿಯನ್ನು ಉಭಯ ದೇಶಗಳು ಶಾಂತಿಯುತವಾಗಿ ಪರಿಹರಿಸಿಕೊಳ್ಳಲಿವೆ ಎಂದು ಅಮೆರಿಕ ಬುಧವಾರ ವಿಶ್ವಾಸ ವ್ಯಕ್ತಪಡಿಸಿದೆ.

ಕಳೆದ ನಾಲ್ಕು ದಶಕಗಳ ಬಳಿಕ ಭಾರತ, ಚೀನಾ ಗಡಿಯಲ್ಲಿ ರಕ್ತಪಾತದ ಸಂಘರ್ಷ ನಡೆದಿದೆ. ನಾವು ಎರಡು ದೇಶಗಳಿಂದ ಶಾಂತಿಯುತ ಮಾತುಕತೆಯನ್ನು ನಿರೀಕ್ಷಿಸುತ್ತೇವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಗಡಿಯಲ್ಲಿನ ಬೆಳವಣಿಗೆಗಳನ್ನು ಅಮೆರಿಕ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಸಂಘರ್ಷದಲ್ಲಿ 20 ಯೋಧರು ಮೃತಪಟ್ಟಿದ್ದಾರೆ ಎಂದು ಭಾರತ ಪ್ರಕಟಿಸಿದೆ. ಮೃತ ಯೋಧರ ಕುಟುಂಬಗಳಿಗೆ ನಾವು ಸಂತಾಪ ಸೂಚಿಸುತ್ತೇವೆ ಎಂದು ಅಮೆರಿಕ ಹೇಳಿದೆ.

ಭಾರತ ಮತ್ತು ಚೀನಾ ಗಡಿ ಸಂಘರ್ಷದ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರು ಮಧ್ಯಸ್ಥಿಕೆ ವಹಿಸಲು ಸಿದ್ಧರಿದ್ದಾರೆ. ಈ ಬಗ್ಗೆ ಜೂನ್‌ 2 ರಂದುಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಚರ್ಚೆ ನಡೆಸಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಭಾರತ ನಮ್ಮ ಮಿತ್ರ ರಾಷ್ಟ್ರವಾಗಿದ್ದು, ಚೀನಾದೊಂದಿಗೆ ಗಡಿ ಸಮಸ್ಯೆ ಸೇರಿದಂತೆ ಹಲವು ವಿಷಯಗಳಲ್ಲಿ ಮನಸ್ತಾಪ ಹೊಂದಿದೆ ಎಂದು ಅಮೆರಿಕ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT