ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಗ್ದಂಡನೆಗೆ ಸಿದ್ಧತೆ: ಸ್ಪೀಕರ್‌ ವಿರುದ್ಧ ಟ್ರಂಪ್‌ ವಾಗ್ದಾಳಿ

Last Updated 18 ಡಿಸೆಂಬರ್ 2019, 19:40 IST
ಅಕ್ಷರ ಗಾತ್ರ

ವಾಷಿಂಗ್ಟನ್‌ : ವಾಗ್ದಂಡನೆಗೆ ಸಿದ್ಧತೆಗಳು ನಡೆದಿರುವಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಸಂಸತ್ತಿನ ಸ್ಪೀಕರ್‌ ನ್ಯಾನ್ಸಿ ಪೆಲೊಸಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಡೆಮಾಕ್ರೆಟಿಕ್‌ ಸಂಸದರು ಅಸಂವಿಧಾನಿಕವಾಗಿ ಅಧಿಕಾರದ ದುರುಪಯೋಗ ಪಡಿಸಿಕೊಂಡಿದ್ದಾರೆ. ಕಾನೂನುಬಾಹಿರ ಮತ್ತು ಪಕ್ಷಪಾತದಿಂದ ಕೂಡಿದ ಅವರ ಪ್ರಯತ್ನಕ್ಕೆ ನಾನು ಬಲಿಪಶು ಆಗಿದ್ದೇನೆ’ ಎಂದು ಆರೋಪಿಸಿದ್ದಾರೆ.

ಟ್ರಂಪ್‌ ಅವರು ತಮ್ಮ ಆಕ್ರೋಶವನ್ನು ಆರು ಪುಟಗಳ ಪತ್ರದಲ್ಲಿ ವ್ಯಕ್ತಪಡಿಸಿದ್ದಾರೆ.’ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧದ ವಾಗ್ದಂಡನೆ ಕ್ರಮ ನ್ಯಾಯೋಚಿತವಲ್ಲ’ ಎಂದು ಟ್ರಂಪ್‌ ಪ್ರತಿಪಾದಿಸಿದ್ದಾರೆ.

’ಇಂಥ ವಾಗ್ದಂಡನೆ ಪ್ರಯತ್ನ ಯಾವ ಅಧ್ಯಕ್ಷರಿಗೂ ಆಗಬಾರದು. ಇದಕ್ಕಾಗಿ ಪ್ರಾರ್ಥಿಸುತ್ತೇನೆ. ಕ್ಷುಲ್ಲಕ ಕಾರಣಕ್ಕೆ ವಾಗ್ದಂಡನೆ ವಿಧಿಸುವುದಿಲ್ಲ ಎಂಬ ಆಶಯ ನನ್ನದಾಗಿದೆ’ ಎಂದು ಅವರು ಹೇಳಿದ್ದಾರೆ.

ಟ್ರಂಪ್ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ಪೆಲೊಸಿ, ’ಪತ್ರದ ಸಾರಾಂಶವನ್ನು ಮಾತ್ರ ನೋಡಿದ್ದೇನೆ. ಇದು ನಿಜವಾಗಿಯೂ ಅನಾರೋಗ್ಯಕರ ನಡೆ‘ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT