ಶುಕ್ರವಾರ, ಫೆಬ್ರವರಿ 21, 2020
18 °C

ನರೇಂದ್ರ ಮೋದಿ ಅತ್ಯುತ್ತಮ ಸಂಭಾವಿತ: ಡೊನಾಲ್ಡ್ ಟ್ರಂಪ್

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಬ್ಬ ಅತ್ಯುತ್ತಮ ಸಂಭಾವಿತ ಎಂದು ಬಣ್ಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಟ್ರಂಪ್ ಅವರು ಇದೇ 24 ಮತ್ತು 25ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭಾರತದ ಜತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಬಗ್ಗೆ ಸುಳಿವು ನೀಡಿದ್ದಾರೆ.

‘ಅವರು (ಭಾರತದವರು) ಏನಾದರೂ ಒಪ್ಪಂದ ಮಾಡಲು ಬಯಸಿದರೆ ನೋಡೋಣ... ಸರಿಯಾದ ಒಪ್ಪಂದ ಮಾಡಲು ಸಾಧ್ಯವಾದರೆ ಮಾಡೋಣ’ ಎಂದು ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: 

‘ಈ ಭೇಟಿಯು ಮೋದಿ ಮತ್ತು ಟ್ರಂಪ್ ನಡುವಣ ಗಾಢ ವೈಯಕ್ತಿಕ ಸಂಬಂಧದ ಪ್ರತಿಫಲನವಾಗಿರಲಿದೆ. ಭಾರತ ಮತ್ತು ಅಮೆರಿಕ ನಡುವಣ ಬಾಂಧವ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಅವರ ಬಲವಾದ ಬಯಕೆಯನ್ನು ತೋರಿಸುತ್ತದೆ’ ಎಂದು ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರನ್‌ಜೀತ್ ಸಿಂಗ್ ಸಿಂಧೂ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು