ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಭಾರತೀಯರೊಂದಿಗೆ ದೀಪಾವಳಿ ಆಚರಿಸಿದ ಡೊನಾಲ್ಡ್ ಟ್ರಂಪ್ 

Last Updated 28 ಅಕ್ಟೋಬರ್ 2019, 3:08 IST
ಅಕ್ಷರ ಗಾತ್ರ

ವಾಷಿಂಗ್ಟನ್‌:ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾನುವಾರದೀಪಾವಳಿ ಹಬ್ಬ ಆಚರಿಸಿದರು. ಭಾರತೀಯ ಅಮೆರಿಕನ್ನರು, ಭಾರತೀಯ ಮೂಲದ ಆಡಳಿತಾಧಿಕಾರಿಗಳು ಹಾಗೂ ರಾಜತಾಂತ್ರಿಕ ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.

ಶ್ವೇತಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ದೀಪ ಬೆಳಗಿಸಿದ ಬಳಿಕ ದೀಪಾವಳಿಯ ಶುಭಾಶಯಗಳನ್ನು ಕೋರಿದರು.

ಅಮೆರಿಕ ಹಾಗೂ ಜಗತ್ತಿನಾದ್ಯಂತ ಇರುವ ಹಿಂದೂಗಳು, ಬೌದ್ಧರು, ಸಿಖ್ಖರು ಹಾಗೂ ಜೈನರು ಈ ಹಬ್ಬ ಆಚರಿಸುತ್ತಿದ್ದಾರೆ, ಅವರಿಗೆ ನನ್ನ ಶುಭಾಶಯಗಳು ಎಂದುಟ್ರಂಪ್, ಅಮರಿಕದಲ್ಲಿ ದೀಪಾವಳಿ ಆಚರಣೆಯುಧಾರ್ಮಿಕ ಸ್ವಾತಂತ್ರ್ಯದ ಸಂಕೇತವಾಗಿದೆ ಎಂದು ಹೇಳಿದರು.

ನಮ್ಮ ಆಡಳಿತದಲ್ಲಿ ಧಾಮಿರ್ಕ ಸ್ವಾತಂತ್ರ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಭಾರತೀಯ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT