ಭಾನುವಾರ, ಜನವರಿ 19, 2020
28 °C

ಪ್ರತಿದಾಳಿಗೆ ಮುಂದಾದರೆ ಇರಾನ್‌ನ 52 ಸ್ಥಳಗಳ ಮೇಲೆ ದಾಳಿ: ಟ್ರಂಪ್‌ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್​: ಇರಾನ್‌ ಸೇನೆಯ ಖಾಸಿಂ ಸುಲೇಮಾನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಇರಾನ್‌ ಬೆದರಿಕೆ ಹಾಕಿರುವ ಬೆನ್ನಲ್ಲೇ  ನಮ್ಮ ಮೇಲೆ ದಾಳಿ ಮಾಡಿದರೆ ಇರಾನ್​ನ 52 ಸ್ಥಳಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ಪ್ರತಿ ದಾಳಿ ನಡೆಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಎಚ್ಚರಿಕೆ ನೀಡಿದ್ದಾರೆ.

ಪ್ರತಿದಾಳಿಗೆ ಸಂಚು ರೂಪಿಸುತ್ತಿರುವ ಇರಾನ್​ಗೆ ಸರಣಿ ಟ್ವೀಟ್‌ಗಳ ಮೂಲಕ ಡೊನಾಲ್ಡ್​ ಟ್ರಂಪ್​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಇರಾಕ್‌ ರಾಜಧಾನಿ ಬಾಗ್ದಾದ್ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಸುಕಿನಲ್ಲಿ ಅಮೆರಿಕ ವಾಯುದಾಳಿ ನಡೆಸಿ ಇರಾನ್‌ನ ಸೇನೆಯ ‘ರೆವಲ್ಯೂಷನ್ ಗಾರ್ಡ್‌’ ಪಡೆಯ ಮುಖ್ಯಸ್ಥ ಮೇಜರ್ ಜನರಲ್ ಖಾಸಿಂ ಸುಲೇಮಾನಿಯನ್ನು ಕೊಂದುಹಾಕಿತ್ತು. ಈ ಹತ್ಯೆಗೆ  ಸೇಡು ತೀರಿಸಿಕೊಳ್ಳುವುದಾಗಿ ಇರಾನ್‌ ಬೆದರಿಕೆ ಹಾಕಿತ್ತು.

ಇದನ್ನೂ ಓದಿ:  ಸುಲೇಮಾನಿ ಹತ್ಯೆಗೇನು ಕಾರಣ: ಸರಣಿ ಟ್ವೀಟ್‌ನಲ್ಲಿ ನಿಲುವು ಸ್ಪಷ್ಟಪಡಿಸಿದ ಟ್ರಂಪ್

ನಮ್ಮ ಮೇಲೆ ಪ್ರತಿ ದಾಳಿ ನಡೆದರೆ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಹಾಗೂ ಪ್ರಮುಖ ಸ್ಥಳಗಳನ್ನು ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಲಾಗುವುದು, ಇರಾನ್‌ ಸೇರಿ 52 ಸ್ಥಳಗಳ ಮೇಲೆ ನಿಗಾ ಇಡಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು