ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂದೇ ಭಾರತ್ ಮಿಷನ್ | ಇಂದು ಢಾಕಾದಿಂದ 169 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್‌

Last Updated 13 ಮೇ 2020, 7:25 IST
ಅಕ್ಷರ ಗಾತ್ರ

ಢಾಕಾ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ 169 ಭಾರತೀಯ ವಿದ್ಯಾರ್ಥಿಗಳನ್ನು ಇಂದು ಏರ್‌ ಇಂಡಿಯಾ ವಿಮಾನದಲ್ಲಿ ಭಾರತಕ್ಕೆ ವಾಪಸ್‌ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ.

ವಿದ್ಯಾರ್ಥಿಗಳ ಹೊತ್ತು ತರುವ ವಿಮಾನ ರಾತ್ರಿ ವೇಳೆಗೆ ಶ್ರೀನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.

ಢಾಕಾದಿಂದ ಭಾರತೀಯರನ್ನು ಕರೆತರುತ್ತಿರುವ ಐದನೇ ವಿಮಾನ ಇದಾಗಿದೆ. ಮಂಗಳವಾರ 169 ವಿದ್ಯಾರ್ಥಿಗಳನ್ನು ಶ್ರೀನಗರಕ್ಕೆ, ಸೋಮವಾರ 107 ಮಂದಿ ಭಾರತೀಯರನ್ನು ಮುಂಬೈಗೆ ಕರೆತರಲಾಗಿತ್ತು.

ಈಗಾಗಲೇ 405 ಮಂದಿ ಭಾರತೀಯರು ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಕೇಂದ್ರ ಸರ್ಕಾರ ಮೇ 7ರಿಂದ ವಂದೇ ಭಾರತ್‌ ಮಿಷನ್‌ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವವರನ್ನು ಸ್ವದೇಶಕ್ಕೆ ಕರೆತರುವ ಪ್ರಕ್ರಿಯೆ ಆರಂಭಿಸಿದೆ.

64 ಏರ್‌ ಇಂಡಿಯಾ ವಿಮಾನಗಳಲ್ಲಿ ವಿವಿಧ ದೇಶಗಳಲ್ಲಿ ನೆಲೆಸಿರುವ 15,000 ಮಂದಿ ಭಾರತೀಯರನ್ನು ಕರೆತರಲಾಗುತ್ತದೆ ಎಂದು ಸರ್ಕಾರ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT