ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 ಗಂಭೀರ ಸ್ಥಿತಿವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Last Updated 9 ಜೂನ್ 2020, 10:00 IST
ಅಕ್ಷರ ಗಾತ್ರ

ಜೆನೆವಾ: ‘ಯುರೋಪ್‌ನಲ್ಲಿ ಸುಧಾರಣೆ ಕಂಡುಬಂದರೂ, ಕೋವಿಡ್–19 ಪರಿಸ್ಥಿತಿಯು ವಿಶ್ವದಾದ್ಯಂತ ದಿನೇ ದಿನೇ ಗಂಭೀರವಾಗುತ್ತಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದನೊಮ್‌ ಗೆಬ್ರೆಯೆಸುಸ್‌ ಅವರು, ‘ವಿಶ್ವ ಆರೋಗ್ಯ ಸಂಸ್ಥೆಗೆ ವರದಿಯಾಗುತ್ತಿರುವ ಶೇ 75 ಪ್ರಕರಣಗಳು ಅಮೆರಿಕ ಮತ್ತು ದಕ್ಷಿಣ ಏಷ್ಯಾದ 10 ರಾಷ್ಟ್ರಗಳಿಗೆ ಸಂಬಂಧಿಸಿದ್ದಾಗಿದೆ’ ಎಂದರು.

‘ಕಳೆದ 10 ದಿನಗಳಲ್ಲಿ ಒಂಬತ್ತು ದಿನ 1 ಲಕ್ಷಕ್ಕೂ ಅಧಿಕ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಭಾನುವಾರ 1,36,000 ಲಕ್ಷ ಪ್ರಕರಣ ವರದಿಯಾಗಿವೆ. ಇದು, ಈವರೆಗಿನ ಅತ್ಯಧಿಕ ಸಂಖ್ಯೆ’ ಎಂದರು.

‘ಆಫ್ರಿಕಾದ ಬಹುತೇಕ ರಾಷ್ಟ್ರಗಳಲ್ಲಿ ಪ್ರಕರಣಗಳು ಹೆಚ್ಚುತ್ತಿವೆ. ಇದೇ ಸಂದರ್ಭದಲ್ಲಿ ಹಲವು ರಾಷ್ಟ್ರಗಳಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಕಂಡು ಬರುತ್ತಿವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT