ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌ ಮೂಲದ ಬಗ್ಗೆ ನಿಖರವಾಗಿ ಈಗಲೇ ಹೇಳಲು ಆಗದು: ವಿಶ್ವ ಆರೋಗ್ಯ ಸಂಸ್ಥೆ

Last Updated 21 ಏಪ್ರಿಲ್ 2020, 8:43 IST
ಅಕ್ಷರ ಗಾತ್ರ

ಬೀಜಿಂಗ್‌: ಹೊಸ ಕೊರೊನಾ ವೈರಸ್‌ನ ನಿರ್ದಿಷ್ಟ ಮೂಲವನ್ನು ಸದ್ಯಕ್ಕೆ ನಿಖರವಾಗಿ ಹೇಳಲು ಆಗುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೊರೊನಾ ವೈರಸ್‌ ನಿರ್ದಿಷ್ಟ ಮೂಲದ ಬಗ್ಗೆ ಈ ವರೆಗೆ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ವಿಶ್ವ ಸಂಸ್ಥೆಯ ಪಶ್ಚಿಮ ಪೆಸಿಫಿಕ್ ಪ್ರಾದೇಶಿಕ ನಿರ್ದೇಶಕ ತಕೇಶಿ ಕಾಸೈ ತಿಳಿಸಿದ್ದಾರೆ.

ಸದ್ಯ ಲಭ್ಯವಿರುವ ಮಾಹಿತಿ, ಸಾಕ್ಷ್ಯಗಳ ಪ್ರಕಾರ ಕೊರೊನಾ ವೈರಸ್‌ ಪ್ರಾಣಿ ಮೂಲದ್ದು ಎಂದು ನಂಬಲಾಗಿದೆ ಎಂದು ಅವರು ಸುದ್ದಿ ಸಂಸ್ಥೆಯೊಂದಕ್ಕೆ ಹೇಳಿದ್ದಾರೆ.

ಕೊರೊನಾ ವೈರಸ್‌ ಮೂಲವನ್ನು ತಿಳಿಯಲು ಅಮೆರಿಕ ಪ್ರಯತ್ನಿಸುತ್ತಿರುವುದಾಗಿಯೂ, ಅದರ ಮೂಲ ವುಹಾನ್‌ನ ಲ್ಯಾಬ್‌ ಹೌದೋ ಅಲ್ಲವೋ ಎಂಬುದನ್ನು ತನಿಖೆ ಮಾಡುವುದಾಗಿಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇತ್ತೀಚೆಗಷ್ಟೇ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT