ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳೆಯರ ದುಡಿಮೆ ಮಕ್ಕಳ ಅಪೌಷ್ಟಿಕತೆಗೆ ಕಾರಣ’

Last Updated 26 ಜೂನ್ 2019, 19:45 IST
ಅಕ್ಷರ ಗಾತ್ರ

ಲಂಡನ್‌ (ಪಿಟಿಐ): ಕೃಷಿ ಚಟುವಟಿಕೆಗಳಲ್ಲಿ ಅತಿಯಾಗಿ ತೊಡಗಿಸಿಕೊಳ್ಳುವ ಭಾರತೀಯ ಮಹಿಳೆಯರ ಕುಟುಂಬಗಳು ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿವೆ ಎಂದು ಅಧ್ಯಯನವೊಂದು ತಿಳಿಸಿದೆ.

ಬ್ರಿಟನಿನಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯ (ಯುಇಎ) ನಡೆಸಿದ ಅಧ್ಯಯನದಿಂದ ಈ ಅಂಶ ಬೆಳಕಿಗೆ ಬಂದಿದೆ.ಈ ಅಧ್ಯಯನ ‘ಜರ್ನಲ್‌ ಫೆಮಿನಿಸ್ಟ್‌ ಎಕಾನಾಮಿಕ್ಸ್‌’ ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದೆ.

2014–16ರಲ್ಲಿ ಮಹಾರಾಷ್ಟ್ರದ ವಾರ್ಧಾ ಮತ್ತು ಒಡಿಶಾದ ಕೊರಪುತ್‌ ಜಿಲ್ಲೆಯ ಹನ್ನೆರಡು ಗ್ರಾಮಗಳಲ್ಲಿ ಸಂಗ್ರಹಿಸಿದಪ್ರಾಥಮಿಕ ದತ್ತಾಂಶಗಳ ಆಧಾರದಲ್ಲಿ ಈ ಸಂಶೋಧನೆ ನಡೆಸಲಾಗಿದೆ.

ಈ ಎರಡೂ ಪ್ರದೇಶಗಳಲ್ಲಿಯೂ ಮಹಿಳೆಯರು 13 ಗಂಟೆಗಳಿಗಿಂತ ಹೆಚ್ಚು ಅವಧಿ ದುಡಿಯುತ್ತಾರೆ. ಹೀಗಾಗಿ ನಿದ್ರಾಹೀನತೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಗಂಡಸರು ದುಡಿಮೆಯ ಸಲುವಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಾರೆ. ಹಾಗಾಗಿ ಆಹಾರ ಪದಾರ್ಥಗಳ ಸಂಗ್ರಹಣೆಯ ಜೊತೆಗೆ ಅದರ ತಯಾರಿಯ ಜವಾಬ್ದಾರಿ ಮಹಿಳೆಯ ಮೇಲಿರುತ್ತದೆ.

ಭಾರತದ ಗ್ರಾಮೀಣ ಪ್ರದೇಶಗಳ ಮಹಿಳೆಯರು ಸ್ವಂತ ಕೃಷಿ ಜಮೀನಿನಲ್ಲಿ ಕೆಲಸ ಮಾಡುವ ಜೊತೆಗೆ ಬೇರೆಯವರ ಜಮೀನಿನಲ್ಲಿ ಕಾರ್ಮಿಕರಾಗಿಯೂ ದುಡಿಯುತ್ತಾರೆ. ಇದರ ಜೊತೆಗೆ ಕುಟುಂಬದ ನಿರ್ವಹಣೆ ಮತ್ತು ಮಕ್ಕಳ ಕಾಳಜಿಯ ಜವಾಬ್ದಾರಿ ಮಹಿಳೆಯ ಮೇಲಿರುತ್ತದೆ. ಸಾಮರ್ಥ್ಯದ ಮಿತಿಗಿಂತ ಅತಿಯಾಗಿ ದುಡಿಯುವುದರಿಂದ ಮಹಿಳೆಯರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕೆಲಸದಲ್ಲಿಯೇ ಹೆಚ್ಚು ಹೊತ್ತು ತೊಡಗಿಸಿಕೊಳ್ಳುವುದರಿಂದ ಕುಟುಂಬದ ಕಾಳಜಿಗೂ ಅವರಿಗೆ ಸಮಯ ದೊರಕುವುದಿಲ್ಲ. ಇದರಿಂದ ಕುಟುಂಬದ ಪೌಷ್ಟಿಕಾಂಶದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಈ ಅಧ್ಯಯನ ತಿಳಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT