ಬುಧವಾರ, ಆಗಸ್ಟ್ 4, 2021
25 °C

World covid-19 update: ಅಮೆರಿಕದಲ್ಲಿ 18 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾವೈರಸ್‌ ಸೋಂಕಿತರ ಸಂಖ್ಯೆ ಅಮೆರಿಕದಲ್ಲಿ 18 ಲಕ್ಷ ದಾಟಿದೆ ಎಂದು ಜಾನ್‌ ಹಾಪ್‌ಕಿನ್ಸ್‌ ವಿವಿಯ ಕೊರೊನಾ ಸಂಶೋದನಾ ಕೇಂದ್ರ ಮಾಹಿತಿ ನೀಡಿದೆ.

ಅಮೆರಿಕದಲ್ಲಿ ಇದುವರೆಗೆ ಒಟ್ಟು 18,11,370 ಜನರಿಗೆ ಸೋಂಕು ತಗುಲಿದ್ದು, 1,05,165 ಜನರು ಮೃತಪಟ್ಟಿದ್ದಾರೆ. ಈ ದೇಶದ ನ್ಯೂಯಾರ್ಕ್ ಒಂದರಲ್ಲೇ ಒಟ್ಟು 3,71,711 ಪ್ರಕರಣಗಳು ವರದಿಯಾಗಿದ್ದು, 29,833 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕದ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದ್ದು,  ರಷ್ಯಾದಲ್ಲಿ 4 ಲಕ್ಷ ಮೀರಿದೆ. ಈ ದೇಶಗಳಲ್ಲಿ ಕ್ರಮವಾಗಿ 29,937 ಮತ್ತು 4,849 ಜನರು ಮೃತಪಟ್ಟಿದ್ದಾರೆ.

ಇಂಗ್ಲೆಂಡ್‌ನಲ್ಲಿ 2,77,736 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 39,127 ಸೋಂಕಿತರು ಸಾವಿಗೀಡಾಗಿದ್ದಾರೆ.

ಜಗತ್ತಿನಾದ್ಯಂತ ಇದುವರೆಗೆ ಒಟ್ಟು 62,66,192 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಾವಿನ ಸಂಖ್ಯೆ 3.75 ಲಕ್ಷಕ್ಕೆ ಏರಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು