ಸೋಮವಾರ, ಸೆಪ್ಟೆಂಬರ್ 20, 2021
23 °C

World covid-19 update: 65 ಲಕ್ಷ ದಾಟಿದ ಜಾಗತಿಕ ಸೋಂಕಿತರ ಸಂಖ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್: ಜಗತ್ತಿನಾದ್ಯಂತ 65,13,301 ಜನರಿಗೆ ಕೋವಿಡ್–19 ಸೋಂಕು ತಗುಲಿದೆ. ಇದರಲ್ಲಿ, 28,08,917 ಮಂದಿ ಗುಣಮುಖರಾಗಿದ್ದಾರೆ ಎಂದು ಜಾನ್‌ ಹಾಪ್‌ಕಿನ್ಸ್‌ ವಿವಿಯ ಕೊರೊನಾ ಸಂಶೋದನಾ ಕೇಂದ್ರ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 3,86,091 ಸೋಂಕಿತರು ಮೃತಪಟ್ಟಿದ್ದಾರೆ.

ಅತಿ ಹೆಚ್ಚು (18,51,520) ಸೋಂಕು ಕಾಣಿಸಿಕೊಂಡಿರುವ ಅಮೆರಿಕದಲ್ಲಿ, ಇದುವರೆಗೆ ಒಟ್ಟು 1,07,175 ಜನರು ಮೃತಪಟ್ಟಿದ್ದಾರೆ. ಈ ದೇಶದ ನ್ಯೂಯಾರ್ಕ್ ಒಂದರಲ್ಲೇ 30,019 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕದ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 5,84,016ಕ್ಕೆ ಏರಿಕೆಯಾಗಿದೆ. ರಷ್ಯಾದಲ್ಲಿ 4,84,016 ಲಕ್ಷ ಮೀರಿದೆ. ಈ ದೇಶಗಳಲ್ಲಿ ಕ್ರಮವಾಗಿ 32,548 ಮತ್ತು 5,208 ಜನರು ಮೃತಪಟ್ಟಿದ್ದಾರೆ.

ಇಂಗ್ಲೆಂಡ್‌ನಲ್ಲಿ 2,81,270 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 39,811 ಸೋಂಕಿತರು ಸಾವಿಗೀಡಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು