ಮಂಗಳವಾರ, ಜೂಲೈ 7, 2020
28 °C

World covid-19 update: 66 ಲಕ್ಷ ಜನರಿಗೆ ಸೋಂಕು, 28.5 ಲಕ್ಷ ಸೋಂಕಿತರು ಗುಣಮುಖ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ಜಗತ್ತಿನಾದ್ಯಂತ ಭೀತಿ ಸೃಷ್ಟಿಸಿರುವ ಕೋವಿಡ್–19 ಸೋಂಕು 66 ಲಕ್ಷಕ್ಕೂ ಹೆಚ್ಚು ಜನರಿಗೆ ತಗುಲಿದ್ದು, ಅದರಲ್ಲಿ 28.5 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿವಿಯ ಕೊರೊನಾ ಅಧ್ಯಯನ ಕೇಂದ್ರ ಮಾಹಿತಿ ನೀಡಿದೆ. ಸಾವಿನ ಸಂಖ್ಯೆ 3.89 ಲಕ್ಷದ ಗಡಿ ದಾಟಿದೆ.

ಅತಿಹೆಚ್ಚು (1,872,557) ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕ ಒಂದರಲ್ಲೇ 1,08,208 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 4,85,002 ಮಂದಿ ಗುಣಮುಖರಾಗಿದ್ದಾರೆ. ಅಮೆರಿಕ ನಂತರ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ರಾಷ್ಟ್ರಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 5,84,016 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 2,38,617 ಮಂದಿ ಗುಣಮುಖರಾಗಿದ್ದು, 35,548 ಸೋಂಕಿತರು ಮೃತಪಟ್ಟಿದ್ದಾರೆ.

ರಷ್ಯಾದಲ್ಲಿ 4,40,538 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 2,04,197 ಸೋಂಕಿತರು ಗುಣಮುಖರಾಗಿದ್ದು, 5,376 ಮಂದಿ ಮೃತಪಟ್ಟಿದ್ದಾರೆ. ಇಂಗ್ಲೆಂಡ್‌ನಲ್ಲಿ 2,83,079 ಪ್ರಕರಣಗಳು ಖಚಿತವಾಗಿವೆ. 39,987 ಮಂದಿ ಮೃತಪಟ್ಟಿದ್ದಾರೆ.

ಇಟಲಿಯಲ್ಲಿ 33,689, ಫ್ರಾನ್ಸ್‌ನಲ್ಲಿ 29,068 ಹಾಗೂ ಸ್ಪೇನ್‌ನಲ್ಲಿ 27,133 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಗುರುವಾರ ರಾತ್ರಿ 8ರ ವರೆಗೆ 1,06,737 ಪ್ರಕರಣಗಳು ಸಕ್ರಿಯವಾಗಿವೆ. 6,075 ಸೋಂಕಿತರು ಮೃತಪಟ್ಟಿದ್ದು, 1,04,106 ಮಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು