ಗುರುವಾರ , ಜೂಲೈ 2, 2020
28 °C

Covid-19 World Update | 25ಲಕ್ಷ ಮಂದಿ ಗುಣಮುಖ; ಸೋಂಕಿತರ ಸಂಖ್ಯೆ 60 ಲಕ್ಷದತ್ತ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾವೈರಸ್‌ ಸೋಂಕಿತರ ಸಂಖ್ಯೆ ಇದುವರೆಗೆ 59.74 ಲಕ್ಷಕ್ಕೆ ಏರಿಕೆಯಾಗಿದ್ದು, 25 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ನೀಡಿದೆ.

25,22,819 ಸೋಂಕಿತರು ಇದುವರೆಗೆ ಗುಣಮುಖರಾಗಿದ್ದು, 3,65,976 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭಾರತದೊಂದಿಗಿನ ಗಡಿ ವಿವಾದ: ಟ್ರಂಪ್ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಚೀನಾ ​

ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 4,65,166ಕ್ಕೆ ಏರಿಕೆಯಾಗಿದ್ದು, 27,878 ಮಂದಿ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ 3,96,575 ಜನರಿಗೆ ಸೋಂಕು ತಗುಲಿದ್ದು, ಈವರೆಗೆ 4,555 ಮಂದಿ ಮೃತಪಟ್ಟಿದ್ದಾರೆ. ಬ್ರಿಟನ್‌ನಲ್ಲಿ 2,72,615 ಜನರಿಗೆ ಕೊರೊನಾ ತಗುಲಿದ್ದು, 38,243 ಮಂದಿ ಕೊನೆಯುಸಿರೆಳೆದಿದ್ದಾರೆ.

ಸೋಂಕಿನಿಂದಾಗಿ ಈವರೆಗೆ ಸ್ಪೇನ್‌ನಲ್ಲಿ 27,121, ಇಟಲಿಯಲ್ಲಿ 33,229, ಫ್ರಾನ್ಸ್‌ನಲ್ಲಿ 28,717 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು