ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಕಳೆದ 24 ಗಂಟೆಗಳಲ್ಲಿ ಅಮೆರಿಕದಲ್ಲಿ 941 ಮಂದಿ ಸಾವು

Last Updated 12 ಜೂನ್ 2020, 14:54 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಬೀಜಿಂಗ್‌ನಲ್ಲಿ ಎರಡು ತಿಂಗಳ ನಂತರ ಕೊರೊನಾವೈರಸ್ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿರುವು ದರಿಂದ ಪ್ರಾಥಮಿಕ ಶಾಲೆ ಆರಂಭ ಇನ್ನೂ ವಿಳಬಂವಾಗಲಿದೆ ಎಂದು ಸರ್ಕಾರ ಹೇಳಿದೆ. ಚೀನಾದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದ್ದರೂ, ವಿದೇಶದಿಂದ ತಾಯ್ನಾಡಿಗೆ ವಾಪಾಸ್ ಆದವರಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಮತ್ತೊಮ್ಮೆ ಪ್ರಕರಣಗಳ ಸಂಖ್ಯೆ ಏರಿಕೆ ಆಗಿದೆ.

ಉಕ್ರೇನ್‌ನ ಅಧ್ಯಕ್ಷ ವಲೋಡಿಮೇರ್ ಜೆಲೆನ್ಸ್ಕಿ ಅವರ ಪತ್ನಿ ಒಲೆನಾ ಜೆಲೆನ್ಸ್ಕಾ ಅವರಿಗೆ ಕೊರೊನಾ ಸೋಂಕು ತಗಲಿದೆ. ಸೋಂಕು ತಗುಲಿರುವ ಮಾಹಿತಿಯನ್ನು ಒಲೆನಾ ಅವರೇ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಜಾನ್ಸ್ ಹಾಪ್ಕಿನ್ಸ್ ಯುನಿವರ್ಸಟಿ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ಅಮೆರಿಕದಲ್ಲಿ 941 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೆ ಸಾವಿಗೀಡಾದವರ ಸಂಖ್ಯೆ 11,3,774 ಆಗಿದೆ.
ಜಗತ್ತಿನಲ್ಲಿ ಶುಕ್ರವಾರದ ವರೆಗೆ ಸೋಂಕಿಗೀಡಾದವರ ಸಂಖ್ಯೆ 75,47,702 ಆಗಿದೆ. ಅಮೆರಿಕದಲ್ಲಿ 20,23,690 ಮಂದಿಗೆ ಸೋಂಕು ದೃಢಪಟ್ಟಿದೆ, ಅದೇ ವೇಳೆ ಬ್ರೆಜಿಲ್‌ನಲ್ಲಿ 8,02828, ರಷ್ಯಾ- 510761, ಬ್ರಿಟನ್- 292860 ಮತ್ತು ಸ್ಪೇನ್‌ನಲ್ಲಿ 242707 ಮಂದಿಗೆ ಸೋಂಕು ದೃಢಪಟ್ಟಿದೆ,
ಕೊರೊನಾದಿಂದಾಗಿ ಇಲ್ಲಿಯವರೆಗೆ ಸಾವಿಗೀಡಾದವರ ಸಂಖ್ಯೆ 4,22,062 ಆಗಿದೆ, ಅಮೆರಿಕದಲ್ಲಿ 41364, ಬ್ರೆಜಿಲ್-40,919 ಮತ್ತು ಇಟಲಿಯಲ್ಲಿ 34167 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೆ ಜಗತ್ತಿನ 200ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ 75,83,908 ಮಂದಿಯಲ್ಲಿ ಕೋವಿಡ್‌-19 ಕಾಣಿಸಿಕೊಂಡಿದೆ. ಈ ಪೈಕಿ 33,25,639 ಕ್ರಿಯಾಶೀಲ ಪ್ರಕರಣಗಳಿದ್ದು, 38,35,183 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

53,902 ಕೊರೊನಾ ಸೋಂಕಿತರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಕೊರೊನಾ ಸೋಂಕಿನಿಂದ ಅಮೆರಿಕದ ನ್ಯೂಯಾರ್ಕ್‌ ನಗರವೊಂದರಲ್ಲೇ 30,741 ಜನರು ಮೃತಪಟ್ಟಿದ್ದಾರೆ.

ಬ್ರೆಜಿಲ್‌ ದೇಶವು ಕೊರೊನಾ ಸೋಂಕಿನ ಹೊಸ ಕೇಂದ್ರಬಿಂದುವಾಗಿ ಮಾರ್ಪಟ್ಟಿದ್ದು, ಅಲ್ಲಿನ ಸೋಂಕಿತರ ಸಂಖ್ಯೆ 8,05,649ಕ್ಕೆ ತಲುಪಿದೆ. 41,058ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT