ಗುರುವಾರ , ಜೂಲೈ 2, 2020
28 °C

World covid-19 update: ವಿಶ್ವದಲ್ಲಿ ಸತ್ತವರ ಸಂಖ್ಯೆ 3.71ಲಕ್ಷ ಮಂದಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸತತ ಪ್ರಯತ್ನದಿಂದಲೂ ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು ವಿಶ್ವವನ್ನೇ ತಲ್ಲಣಗೊಳಿಸಿದ್ದು, ವಿಶ್ವದ 215 ರಾಷ್ಟ್ರಗಳಲ್ಲಿ ಒಟ್ಟು ಸಾವಿನ ಸಂಖ್ಯೆ ಭಾನುವಾರದ ವೇಳೆಗೆ  3.71 ಲಕ್ಷ ತಲುಪಿದೆ. ಸೋಂಕಿತರ ಸಂಖ್ಯೆ 61.60 ಲಕ್ಷಕ್ಕೆ ಏರಿಕೆಯಾಗಿದೆ. ಅಮೆರಿಕಾ ಒಂದರಲ್ಲೇ ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ 1.05 ಲಕ್ಷಕ್ಕೆ ಮುಟ್ಟಿದೆ.

ಅಮೆರಿಕಾದಲ್ಲಿ ಇಲ್ಲಿಯವರೆಗೆ ಒಟ್ಟು 105,557 ಮಂದಿ ಸಾವನ್ನಪ್ಪಿದ್ದಾರೆ.  ಇಲ್ಲಿ ಒಟ್ಟು 18.16 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 11.76 ಲಕ್ಷ ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 17 ಸಾವಿರ ಮಂದಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. ಇಲ್ಲಿಯವರೆಗೆ 53.52 ಸಾವಿರ ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ: Covid-19 World Update | 25ಲಕ್ಷ ಮಂದಿ ಗುಣಮುಖ; ಸೋಂಕಿತರ ಸಂಖ್ಯೆ 60 ಲಕ್ಷದತ್ತ

ವಿಶ್ವದಾದ್ಯಂತ 61.60 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ವೈದ್ಯರ ಚಿಕಿತ್ಸೆ, ಆರೋಗ್ಯ ಕಾರ್ಯಕರ್ತರ ಪರಿಶ್ರಮದಿಂದಾಗಿ 27.38 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ವಿಶ್ವದಲ್ಲಿ 29.97 ಲಕ್ಷ ಮಂದಿ ವಿವಿಧ ಆಸ್ಪತ್ರೆ ಹಾಗೂ ತಾತ್ಕಾಲಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಪ್ರಕರಣಗಳೂ(371,006 ಲಕ್ಷ) ಹಾಗೂ ಗುಣಮುಖರಾದವರನ್ನೂ(2,738,284) ಸೇರಿ ಒಟ್ಟು 3,109,290 ಪ್ರಕರಣಗಳನ್ನು ಮುಕ್ತಾಯಗೊಳಿಸಿದ ಪ್ರಕರಣಗಳೆಂದು ಪರಿಗಣಿಸಲಾಗಿದೆ.

ಭಾರತದಲ್ಲಿ ಇಲ್ಲಿಯವರೆಗೆ 182,143 ಪ್ರಕರಣಗಳು ದಾಖಲಾಗಿವೆ.  ಭಾರತದಲ್ಲಿ ಸತ್ತವರ ಸಂಖ್ಯೆ 5185ಕ್ಕೆ ಏರಿದೆ. ಬ್ರಿಟನ್‌‌ನಲ್ಲಿ  
272,826 ಪ್ರಕರಣಗಳು ದಾಖಲಾಗಿವೆ. 38,376 ಮಂದಿ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ 232,664 ಪ್ರಕರಣಗಳು ದಾಖಲಾಗಿದ್ದು,, 33,340 ಮಂದಿ ಸಾವನ್ನಪ್ಪಿದ್ದಾರೆ.  ಸ್ಪೇನ್‌‌ನಲ್ಲಿ 286,308 ಪ್ರಕರಣಗಳು ದಾಖಲಾಗಿದ್ದು, 33,340 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದಲ್ಲಿ 69,496 ಪ್ರಕರಣಗಳು ದಾಖಲಾಗಿದ್ದು, 1,483 ಮಂದಿ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು