ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಪಾಕ್‌ ನಡುವಿನ ಬೆಳವಣಿಗೆಗಳ ಮೇಲೆ ಕಣ್ಣು: ಅಮೆರಿಕ

Last Updated 8 ಆಗಸ್ಟ್ 2019, 2:48 IST
ಅಕ್ಷರ ಗಾತ್ರ

ವಾಷಿಂಗ್ಟನ್‌:ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿ ಹಾಗೂ ಕಲಂ 35–ಎ ಅನ್ನು ಭಾರತ ಸರ್ಕಾರ ರದ್ದು ಮಾಡಿದ ನಂತರದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕ ಹೇಳಿದೆ.

ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಹಿಂಪಡೆದ ಬೆನ್ನಲ್ಲೇ ಪಾಕಿಸ್ತಾನಪ್ರಧಾನಿ ಇಮ್ರಾನ್‌ ಖಾನ್‌ ಅವರು ಬುಧವಾರ ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌ಸಿ) ಸದಸ್ಯರ ಜೊತೆ ಸಭೆ ನಡೆಸಿದ್ದರು.ಇದಾಗಿ ಕೆಲವೇ ಗಂಟೆಗಳಲ್ಲಿ ಭಾರತ ಜತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಳ್ಳುವ ಘೋಷಣೆ ಮಾಡಿದರು.

ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್‌ ಅಜಯ್‌ ಬಿಸರಿಯಾ ಅವರನ್ನು ವಾಪಸ್‌ ಕಳುಹಿಸಿ, ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ವಾಪಸ್‌ ಕರೆಯಿಸಿಕೊಳ್ಳುವುದಾಗಿ ಅವರು ಪ್ರಕಟಿಸಿದ್ದಾರೆ.

ಈ ಬೆಳವಣಿಗೆಗಳಿಂದ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉಂಟಾಗಲಿರುವ ಪರಿಣಾಮಗಳು ಮತ್ತು ಅಸ್ಥಿರತೆಯ ಬಗ್ಗೆ ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಭಾರತ ಸರ್ಕಾರದ ಈ ಕ್ರಮ ಏಕಪಕ್ಷಿಯ ಮತ್ತು ಕಾನೂನುಬಾಹಿರ ಎಂದು ಪಾಕಿಸ್ತಾನ ಅಸಮಾಧಾನ ವ್ಯಕ್ತಪಡಿಸಿತ್ತು.

ದಕ್ಷಿಣಾ ಏಷ್ಯಾದಲ್ಲಿ ಮಿಲಿಟರಿ ಉದ್ವಿಗ್ನತೆಯನ್ನು ಶಮನಗೊಳಿಸುವುದು ಈಗಿನ ಅನಿವಾರ್ಯತೆಯಾಗಿದೆ. ಇದಕ್ಕಾಗಿ ಉಭಯ ದೇಶಗಳು ತುರ್ತು ಮಾತುಕತೆ ನಡೆಸಬೇಕಾಗಿದೆ. ಎರಡು ಕಡೆಯೂ ಶಾಂತಿ ಮತ್ತು ಸಂಯಮವನ್ನು ಕಾಪಡಿಕೊಳ್ಳುವಂತೆ ಅಮೆರಿಕ ಹೇಳಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT