ಬುಧವಾರ, ಫೆಬ್ರವರಿ 26, 2020
19 °C
ರಾಜ್ಯಮಟ್ಟದ ಜೋಗಪ್ಪ ಸಾಂಸ್ಕೃತಿಕ ಹಬ್ಬ ಉದ್ಘಾಟನೆ

‘ಅನುಕಂಪ ಬೇಡ, ಅವಕಾಶ ಕೊಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ‘ಮಂಗಳಮುಖಿಯರು ಹಾಗೂ ಲಿಂಗಪರಿವರ್ತಿತರನ್ನು ಕುಟುಂಬದವರೇ ಸ್ವೀಕರಿಸುವ ಹಾಗೂ ಸಮಾಜ ಒಪ್ಪಿಕೊಳ್ಳುವ ವಾತಾವರಣ ನಿರ್ಮಾಣವಾದಲ್ಲಿ ಅವರು ಮನೆ ಬಿಟ್ಟು ಹೋಗಿ ಭಿಕ್ಷಾಟನೆ, ಲೈಂಗಿಕ ವೃತ್ತಿಗೆ ಇಳಿಯುವ ಅನಿವಾರ್ಯ ಬರುವುದಿಲ್ಲ’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು.

ಬೆಂಗಳೂರಿನ ಪಯಣ ಸಂಸ್ಥೆ ಬುಧವಾರ ಇಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ ಜೋಗಪ್ಪ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಈ ಸಮುದಾಯದಲ್ಲಿ ಹುಟ್ಟಿದ ಕಾರಣಕ್ಕೆ ಸರ್ಕಾರ ನನ್ನನ್ನು ಗುರುತಿಸಿದೆ. ಅಕಾಡೆಮಿಯ ಅಧ್ಯಕ್ಷ ಸ್ಥಾನದಂತಹ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಸಮಾಜದ ಎಲ್ಲ ಸ್ಥರಗಳಲ್ಲಿಯೂ ಈ ಕೆಲಸ ಆಗಬೇಕಿದೆ. ನಮಗೆ ಅನುಕಂಪ ಬೇಡ. ಅವಕಾಶ ಕೊಡಿ’ ಎಂದು ಮನವಿ ಮಾಡಿದರು.

ಗೌರವದಿಂದ ವರ್ತಿಸಿ: ‘ಲೈಂಗಿಕ ಅಲ್ಪಸಂಖ್ಯಾತರಾದ ನಾವು ಹೆಣ್ಣು ಮಕ್ಕಳ ಬಟ್ಟೆ ತೊಡುತ್ತೇವೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಂತೆಯೇ ಗೌರವದಿಂದ ನಡೆದುಕೊಳ್ಳಬೇಕು. ಭಿಕ್ಷೆ ಬೇಡುವಾಗ ಹಣ ಕೊಡದಿದ್ದರೆ ಶಪಿಸಬಾರದು. ಅಸಭ್ಯವಾಗಿ ವರ್ತಿಸಬಾರದು’ ಎಂದು ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಮಾನವ ಹಕ್ಕು ಹೋರಾಟಗಾರ್ತಿ ಎ.ರೇವತಿ ತಮ್ಮ ಬದುಕು ಬಯಲು ಕೃತಿ ಆಧಾರಿತ ‘ನನ್ನ ಧ್ವನಿ’ ಏಕ ವ್ಯಕ್ತಿ ನಾಟಕ ಪ್ರದರ್ಶಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು