ಶನಿವಾರ, ಏಪ್ರಿಲ್ 4, 2020
19 °C
ಕೊರೊನಾ: ನಿಷೇಧಾಜ್ಞೆ ನಡುವೆಯೂ ಜನರ ಓಡಾಟ ಅಬಾಧಿತ

ಕಲಬುರ್ಗಿ: ಪ್ರಯೋಗಾಲಯ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕೊರೊನಾ ಸೋಂಕಿತರ ಗಂಟಲು ದ್ರವವನ್ನು ಪರೀಕ್ಷೆಗೊಳಪಡಿಸುವ ಪ್ರಯೋಗಾಲಯ ಇಲ್ಲಿ ‘ಜಿಮ್ಸ್‌’ನಲ್ಲಿ ಸಿದ್ಧಗೊಂಡಿದ್ದು, ಇದೇ 24ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ನಿತ್ಯ 30 ಜನರ ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯ ಇದಕ್ಕಿದೆ.

‘ಎರಡು ದಿನಗಳವರೆಗೆ ಪ್ರಾಯೋಗಿಕವಾಗಿ ಪರೀಕ್ಷೆನಡೆಸಿ, ನಿಖರತೆಯನ್ನು ಖಾತ್ರಿ ಪಡಿಸಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಕೊರೊನಾ ಶಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲು ನಗರದ ಇಎಸ್‌ಐಸಿಯಲ್ಲಿ 180 ಹಾಸಿಗೆಗಳ ವಿಶೇಷ ವಾರ್ಡ್‌ ತೆರೆಯಲಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಂಭವ ಇರುವುದರಿಂದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಟ್ರಾಮಾ ಆಸ್ಪತ್ರೆಯ 120 ಹಾಸಿಗೆಗಳನ್ನೂ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಒಟ್ಟಾರೆ 40 ವೆಂಟಿಲೇಟರ್‌ ಹೊಂದಿದ ವಿಶೇಷ ವಾರ್ಡ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಜನಸಂಚಾರ: ನಿಷೇಧಾಜ್ಞೆ ಜಾರಿಯಲ್ಲಿದ್ದರೂ ನಗರದ ಜನರು ಸೋಮವಾರ ಹೊರಗಡೆ ಬಂದು ಮನೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಖರೀದಿಸಿದರು. ಆಟೊ ಹಾಗೂ ಖಾಸಗಿ ವಾಹನಗಳ ಪ್ರಯಾಣ ಇತ್ತು. ‘ಕೋವಿಡ್‌–19 ಸೋಂಕು ದೃಢಪಟ್ಟಿರುವ ಮಹಿಳೆ ಮತ್ತು ವೈದ್ಯರೊಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು