7

ಬಜೆಟ್‌ ಮಂಡನೆ ಆರಂಭ; ರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅನಿವಾರ್ಯ– ಸಿಎಂ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ 11.30ಕ್ಕೆ ಮೈತ್ರಿ ಸರ್ಕಾರದ ಮೊದಲ ಬಜೆಟ್‌ ಮಂಡನೆ ಆರಂಭಿಸಿದರು.

ರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅನಿವಾರ್ಯವಾಗುತ್ತಿವೆ. ರಾಜ್ಯದಲ್ಲಿ ಮೈತ್ರಿ ಸರ್ಕಾರದ ಅವಶ್ಯಕತೆಯನ್ನು ಒಪ್ಪಿ ಸರ್ಕಾರ ರಚನೆ ಮಾಡಿದ್ದೇವೆ ಎಂದರು.

ರೈತರ ಸಾಲಮನ್ನಾ ಸಮ್ಮಿಶ್ರ ಸರ್ಕಾರದ ದೊಡ್ಡ ಸವಾಲಾಗಿದೆ. ಅದಕ್ಕಾಗಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಿದ್ದು, ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ರೈತರ ಕುರಿತು ಮತನಾಡುವ ವೇಳೆ ನಿಮ್ಮದೇ ನೆಲ ನಿಮ್ಮದೇ ಬೆಳೆ .... ಎಂಬ ರಾಷ್ಟ್ರಕವಿ ಕುವೆಂಪು ಅವರ ರಚನೆಯ ಸಾಲುಗಳನ್ನು ಪ್ರಸ್ತಾಪಿಸಿದ ಸಿಎಂ, ಸರ್ಕಾರದ ಹಿಂದಿನ ಸಾಧನೆಗಳನ್ನು ವಿವರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !