ಸೋಮವಾರ, ಆಗಸ್ಟ್ 10, 2020
21 °C

ಪ್ಲಾಸ್ಮಾ ದಾನಿಗಳಿಗೆ ₹ 5 ಸಾವಿರ ಪ್ರೋತ್ಸಾಹಧನ: ಸಚಿವ ಡಾ. ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ₹5 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕೋವಿಡ್ ಸೋಂಕಿಗೊಳಗಾದವರ ಪೈಕಿ ಈಗಾಗಲೇ 17,370 ಜನ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 597 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹವರ ಚಿಕಿತ್ಸೆಗೆ ಗುಣಮುಖರಾದವರ ಪ್ಲಾಸ್ಮಾ ಪರಿಣಾಮಕಾರಿಯಾಗಿದೆ. ಪ್ಲಾಸ್ಮಾ ದಾನ ಮಾಡಲು ಗುಣಮುಖರಾದವರು ಮುಂದೆ ಬರಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಇಲ್ಲಿಯವರೆಗೆ 9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ. ಬುಧವಾರ ಒಂದೇ ದಿನ 22,204 ಪರೀಕ್ಷೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.

25 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ಪರೀಕ್ಷೆ ಮಾಡದ ಖಾಸಗಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಅವರು ಎಚ್ಚರಿಸಿದರು.

ಪ್ರಯೋಗಾಲಯಗಳಿಗೆ ಬೇಕಾದ ಉಪಕರಣಗಳ ಕೊರತೆ ಇದ್ದಲ್ಲಿ ಪೂರೈಸಲು ತಕ್ಷಣ ಕ್ರಮವಹಿಸಬೇಕು. ಎಲ್ಲ ಪ್ರಯೋಗಾಲಯಗಳನ್ನು ಒಂದು ವಾರದೊಳಗೆ ಮೇಲ್ದರ್ಜೆಗೇರಿಸಬೇಕು. ಪ್ರತಿದಿನ 500 ಪರೀಕ್ಷೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು