ಭಾನುವಾರ, ಸೆಪ್ಟೆಂಬರ್ 20, 2020
21 °C

ಆಫ್ರಿಕಾ ಪ್ರಜೆಗಳ ಮನೆ ಮೇಲೆ ಸಿಸಿಬಿ ದಾಳಿ: ಖೋಟಾ ನೋಟುಗಳು ಪತ್ತೆ, 7 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೆಣ್ಣೂರು ಹಾಗೂ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿರುವ ಆಫ್ರಿಕಾ ಪ್ರಜೆಗಳ ಮನೆಗಳ ಮೇಲೆ ಮಂಗಳವಾರ ಬೆಳಿಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಖೋಟಾ ನೋಟುಗಳು ಪತ್ತೆ ಆಗಿವೆ.

ಈ ಸಂಬಂಧ 7 ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ₹500 ಹಾಗೂ ₹2000 ಮುಖಬೆಲೆಯ ಖೋಟಾ ನೋಟುಗಳು, ಅಮೆರಿಕನ್ ನಕಲಿ ಡಾಲರ್, ಪಾಸ್ ಪೋರ್ಟ್, ವೀಸಾವನ್ನೂ ಜಪ್ತಿ ಮಾಡಿದ್ದಾರೆ.

'ಖಚಿತ ಮಾಹಿತಿ ಮೇರೆಗೆ 30 ಮನೆಗಳ ಮೇಲೆ ದಾಳಿ ಮಾಡಲಾಗಿತ್ತು. ಆರೋಪಿಗಳು ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವ ಅನುಮಾನವಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ಅಕ್ರಮ ವಾಸ 20 ಮಂದಿ ಬಂಧನ; ನಗರದಲ್ಲಿ ಅಕ್ರಮವಾಗಿ ವಾಸವಿದ್ದ 20  ಆಫ್ರಿಕಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾಳಿ‌ ವೇಳೆಯೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

'ವೀಸಾ ಅವಧಿ ಮುಗಿದರೂ ದೇಶ ಬಿಟ್ಟು ಹೋಗಿಲ್ಲ. 120 ಸಿಬ್ಬಂದಿಯ ತಂಡ ಅವರ ಮನೆ ಮೇಲೆ ದಾಳಿ ಮಾಡಿ ಸೆರೆ ಹಿಡಿದಿದೆ' ಎಂದು ಸಂದೀಪ್ ಪಾಟೀಲ ಹೇಳಿದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು