ಭಾನುವಾರ, ಮೇ 16, 2021
25 °C

ರಾಜ್ಯದಲ್ಲಿ ರಾತ್ರಿ 9ರಿಂದ ಮುಂಜಾನೆ 5ರ ವರೆಗೆ ಕರ್ಫ್ಯೂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಬುಧವಾರದಿಂದ ರಾತ್ರಿ 9ರಿಂದ ಮುಂಜಾನೆ 5 ರವರೆಗೆ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. 

ಕೋವಿಡ್‌ ನಿಯಂತ್ರಣ ಕುರಿತು ಮಂಗಳವಾರ ರಾಜ್ಯವನ್ನು ಉದ್ದೇಶಿ ಮಾತನಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಈ ಸಂಗತಿ ತಿಳಿಸಿದರು. ಅಲ್ಲದೆ, ರಾಜ್ಯದಲ್ಲಿ ಭಾನುವಾರದ ಲಾಕ್‌ಡೌನ್‌ ಮುಂದುವರಿಯುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. 

ಪ್ರಾರಂಭದ ದಿನಗಳಲ್ಲಿ ಕರ್ನಾಟಕ ಕೋವಿಡ್‌ ಅನ್ನು ಯಶಸ್ವಿಯಾಗಿ ನಿಯಂತ್ರಿಸಿತ್ತು. ಆದರೆ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸೋಂಕು ಹೆಚ್ಚುತ್ತಿದೆ. ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಪರಿಹಾರವಲ್ಲ. ಜನತೆ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಆರೋಗ್ಯ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಆಗ ಮಾತ್ರ ಕೋವಿಡ್‌ ನಿಯಂತ್ರಣ ಸಾಧ್ಯ ಎಂದು ಸಿಎಂ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು