ಭಾನುವಾರ, ಸೆಪ್ಟೆಂಬರ್ 26, 2021
22 °C
ತಿಂಗಳಿಗೆ ₹12 ಸಾವಿರ ಗೌರವಧನ ಪಾವತಿ

ಕೆಲಸಕ್ಕೆ ಹಾಜರಾದ ಆಶಾ ಕಾರ್ಯಕರ್ತೆಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 20 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಆಶಾ ಕಾರ್ಯಕರ್ತರು, ಸರ್ಕಾರದಿಂದ ಬೇಡಿಕೆ ಈಡೇರಿಕೆಯ ಭರವಸೆ ಸಿಗುತ್ತಿದ್ದಂತೆಯೇ ಗುರುವಾರದಿಂದ ಕೆಲಸಕ್ಕೆ ಮರಳಿದರು. 

‘ತಿಂಗಳಿಗೆ ₹12 ಸಾವಿರ ಗೌರವಧನ ನೀಡುವುದು ಸೇರಿದಂತೆ ನಮ್ಮ ವಿವಿಧ ಬೇಡಿಕೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿಎನ್. ಅಶ್ವತ್ಥ ನಾರಾಯಣ ಅವರು ಸಕಾರಾತ್ಮಕ ಸ್ಪಂದಿಸಿದ್ದಾರೆ’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ. 

‘ಜುಲೈ 10ರಿಂದ ಪ್ರತಿಭಟನೆ ನಡೆಸುತ್ತಿದ್ದೆವು. ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಥಳಕ್ಕೆ ಬಂದು, ಬೇಡಿಕೆ ಈಡೇರಿಸುವುದಾಗಿ ಖಚಿತ ಭರವಸೆ ನೀಡಿದ್ದಾರೆ. ಈ ಭರವಸೆಯನ್ನು ವಿಶ್ವಾಸದಿಂದ ತೆಗೆದುಕೊಂಡು, ಪ್ರತಿಭಟನೆ ವಾಪಸ್‌ ಪಡೆದಿದ್ದೇವೆ. 30ರಿಂದಲೇ ಎಲ್ಲ ಕಾರ್ಯಕರ್ತರು ಕೆಲಸಕ್ಕೆ ಹಾಜರಾಗಿದ್ದಾರೆ’ ಎಂದು ಸಂಘದ ಅಧ್ಯಕ್ಷ ಕೆ. ಸೋಮಶೇಖರ್‌ ಯಾದಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು