ಬುಧವಾರ, ಸೆಪ್ಟೆಂಬರ್ 22, 2021
29 °C

ರಾಮಮಂದಿರ ಭೂಮಿ ಪೂಜೆ: ಬಿಗಿ ಭದ್ರತೆಗಾಗಿ ಪೊಲೀಸರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯಲಿದ್ದು, ನಗರದಲ್ಲೂ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಭೂಮಿ ಪೂಜೆ ಹಿನ್ನೆಲೆಯಲ್ಲಿ ನಗರದಲ್ಲೂ ಕೆಲ ಸಂಘಟನೆಯವರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ‌. ಉಗ್ರರ ಚಟುವಟಿಕೆ ಬಗ್ಗೆ ಕೇಂದ್ರ ಗುಪ್ತದಳವೂ ಎಚ್ಚರಿಕೆ ನೀಡಿದೆ.

ಇದೇ ಕಾರಣಕ್ಕೆ ಡಿಸಿಪಿಗಳಿಗೆ ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್, 'ಬಿಗಿ ಭದ್ರತೆ ಕೈಗೊಳ್ಳಿ. ಅನುಮಾನ ಬಂದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ' ಎಂದು ಹೇಳಿದ್ದಾರೆ. ಭದ್ರತೆ ಜವಾಬ್ದಾರಿ ಹಾಗೂ ಅದರ ಉಸ್ತುವಾರಿಯನ್ನು ತಾವೇ ವಹಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.

ನಗರದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಡಿಸಿಪಿಗಳು, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳ ಸಭೆ ನಡೆಸುತ್ತಿದ್ದಾರೆ. ಸೂಕ್ಷ್ಯ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಭದ್ರತೆಗೆ ಸಿಬ್ಬಂದಿ ನಿಯೋಜಿಸಲು ಚರ್ಚೆ ನಡೆಸುತ್ತಿದ್ದಾರೆ.

ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್‌‌ಪಿ ಸಿಬ್ಬಂದಿಯನ್ನು ಹಾಗೂ ಗೃಹ ರಕ್ಷಕರನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ನಗರದಾದ್ಯಂತ ಗಸ್ತು ಹೆಚ್ಚಿಸಲು ಡಿಸಿಪಿಗಳು ನಿರ್ಧರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು