ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಕೊಚ್ಚಿಹೋದ ಸೇತುವೆ

Last Updated 19 ಜುಲೈ 2020, 19:31 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲೆಡೆ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣವಾಗಿ ಸುರಿದಿದೆ. ಶನಿವಾರ ರಾತ್ರಿ ಸುರಿದ ಮಳೆಯಿಂದ ಹಳ್ಳ ಉಕ್ಕಿ ಹರಿದಿದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ತಾತ್ಕಾಲಿಕ ಸೇತುವೆಯೊಂದು ಕೊಚ್ಚಿಹೋಗಿದೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದ ಯಲ್ಲಮ್ಮನ ಹಳ್ಳ ಉಕ್ಕಿ ಹರಿದು ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಗಡಿಭಾಗದ ಆಂಧ್ರ ಮತ್ತು ಹಳ್ಳಿಗಳಿಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.ಬಂಡ್ರಾಳ್ ಗ್ರಾಮದ ಹಳ್ಳದ ನೆಲಮಟ್ಟದ ಸೇತುವೆ ನೀರಿನಲ್ಲಿ ಮುಳುಗಿದೆ.

ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯದ ಒಳಹರಿವು ವಾರದ ನಂತರ ಏರಿಕೆಯಾಗಿದೆ. ‘ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಾಗಿದೆ. ಸೋಮವಾರ ಮತ್ತಷ್ಟು ಏರಿಕೆ ಆಗಬಹುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಸಿಬ್ಬಂದಿ ತಿಳಿಸಿದರು.

ನಾಲ್ಕೈದು ದಿನಗಳಿಂದ ಕ್ಷೀಣಗೊಂಡಿದ್ದ ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಭಾನುವಾರ 4 ಟಿಎಂಸಿ ಅಡಿ ನೀರು ಹರಿದು ಬಂದಿದೆ.ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಚಿಕ್ಕಮಗಳೂರು, ಗಿರಿ ಶ್ರೇಣಿ ಪ್ರದೇಶದಲ್ಲಿ ಹದ ಮಳೆಯಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕಪ್ರದೇಶಗಳಲ್ಲಿ ಇಡೀ ದಿನ ಬಿಸಿಲಿನ ವಾತಾವರಣ ಇತ್ತು. ಘಟ್ಟ ಪ್ರದೇಶಗಳ ಕೆಲವೆಡೆ ಮಾತ್ರ ಅಲ್ಪ ಪ್ರಮಾಣದ ಮಳೆ ಬಿದ್ದಿದೆ.

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ.ಹೊಸನಗರ, ಭದ್ರಾವತಿಯಲ್ಲಿ ಜೋರು ಮಳೆಯಾಗಿದೆ.ದಾವಣಗೆರೆ ನಗರ ಸೇರಿ, ನ್ಯಾಮತಿ, ಮಲೇಬೆನ್ನೂರು, ಮಾಯಕೊಂಡಗಳಲ್ಲಿ ಮಳೆಯಾಗಿದೆ.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಬಿರುಸಿನ ಮಳೆಯಾಗಿದೆ.

ಕೋಲಾರ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಮುಂಗಾರು ಹಂಗಾಮಿನ ಬಿತ್ತನೆಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT