ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಪಿ ರವಿ ಚನ್ನಣ್ಣನವರ ಕಚೇರಿ ಸಿಬ್ಬಂದಿಗೂ ಕೊರೊನಾ

Last Updated 25 ಜುಲೈ 2020, 13:47 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ವಲಯ ಐಜಿಪಿ ಸೀಮಂತಕುಮಾರ್ ಸಿಂಗ್ ಕಚೇರಿ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣನವರ ಕಚೇರಿಯ ಒಟ್ಟು 9 ಸಿಬ್ಬಂದಿಯಲ್ಲಿ ಕೊರೊನಾ ದೃಢಪಟ್ಟಿದೆ.

ಎರಡೂ ಕಚೇರಿಗಳು ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿವೆ. ಕಾರು ಚಾಲಕ, ಕಾನ್‌ಸ್ಟೆಬಲ್ ಸೇರಿ ಆರು ಮಂದಿ ಸೋಂಕಿತ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಕೊರೊನಾ ಕೇರ್ ಕೇಂದ್ರದಲ್ಲಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಐಜಿಪಿ ಹಾಗೂ ಎಸ್ಪಿ ಎರಡೂ ಕಚೇರಿಯನ್ನೂ ಸ್ಯಾನಿಟೈಸ್ ಮಾಡಲಾಗಿದೆ. ಐಜಿ‍ಪಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರ ಜೊತೆ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ. ಅವರ ಗಂಟಲಿನ ದ್ರವ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT