ಶನಿವಾರ, ಜುಲೈ 31, 2021
28 °C

ಸಂಸದ ಭಗವಂತ ಖೂಬಾ, ಇಬ್ಬರು ಶಾಸಕರಿಗೆ ಕೋವಿಡ್‌-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೀದರ್‌: ಸಂಸದ ಭಗವಂತ ಖೂಬಾ ಹಾಗೂ ಇಬ್ಬರು ಶಾಸಕರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ. 

ನಾಲ್ಕು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಬೀದರ್‌ ಸಂಸದ ಭಗವಂತ ಅವರ ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ವರದಿ ಪಾಸಿಟಿವ್‌ ಬಂದಿದೆ. ಅವರ ಕುಟುಂಬದ ಸದಸ್ಯರು, ಕಾರು ಚಾಲಕ, ಕಚೇರಿ ಸಿಬ್ಬಂದಿ ಸೇರಿ ಒಟ್ಟು 10 ಜನ ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ. 

ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ  ಚಂದ್ರಶೇಖರ ಪಾಟೀಲ ಅವರು ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ. ಆದರೆ ಇವರಿಗೆ ಸೋಂಕು ತಗುಲಿರುವ ಬಗ್ಗೆ ಜಿಲ್ಲಾಡಳಿತ ದೃಢಪಡಿಸಿಲ್ಲ. ಸ್ವಯ ಪ್ರೇರಣೆಯಿಂದ ಕ್ವಾರಂಟೈನ್‌ ಒಳಗಾಗಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು