ಭಾನುವಾರ, ಜುಲೈ 25, 2021
22 °C

ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ: ಸಚಿವ ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಂದಾಯ ಸಚಿವ ಆರ್‌.ಅಶೋಕ

ಮೈಸೂರು: ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಬುಧವಾರ ಇಲ್ಲಿ ತಿಳಿಸಿದರು.

ಶಾಸಕರು, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಸೇರಿದಂತೆ ಈ ಸಮುದಾಯದ ಹಲವರು ನನಗೆ ಮನವಿ ಮಾಡಿದ್ದರು. ಹೀಗಾಗಿ, ಕಂದಾಯ ಇಲಾಖೆ ಈ ತೀರ್ಮಾನ ಕೈಗೊಂಡಿದೆ. ಇನ್ನುಮುಂದೆ ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಜಾತಿ ಪ್ರಮಾಣಪತ್ರ ಸಿಗಲಿದೆ ಎಂದರು.

ರಾಜ್ಯದ ಜನಸಂಖ್ಯೆಯಲ್ಲಿ ಶೇ 3ರಷ್ಟು ಬ್ರಾಹ್ಮಣರಿದ್ದು, ಸ್ವಾತಂತ್ರ್ಯ ಬಂದಾಗಿನಿಂದ ಈ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಸಿಕ್ಕಿರಲಿಲ್ಲ. ಪ್ರಮಾಣಪತ್ರವಿಲ್ಲದೇ ಶಾಲಾ ಕಾಲೇಜು, ನಿಗಮ ಹಾಗೂ ಇತರ ಕ್ಷೇತ್ರಗಳಲ್ಲಿ ಸೌಲಭ್ಯ ಪಡೆಯಲು ಬ್ರಾಹ್ಮಣರಿಗೆ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು