ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 30, 31ರಂದು ಸಿಇಟಿ: ಕೋವಿಡ್ ಇದ್ದರೂ ಪರೀಕ್ಷೆಗೆ ಅವಕಾಶ

ಸಿಇಟಿ ಬರೆಯಲಿರುವ 1.94 ಲಕ್ಷ ವಿದ್ಯಾರ್ಥಿಗಳು
Last Updated 21 ಜುಲೈ 2020, 19:03 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಇದೇ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ’ ಎಂದುಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಒಟ್ಟು ವಿದ್ಯಾರ್ಥಿಗಳಲ್ಲಿ 30 ವಿದೇಶಿಯರೂ ಇದ್ದಾರೆ. ಗಡಿನಾಡಿನ 188 ವಿದ್ಯಾರ್ಥಿಗಳಿಗೆ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್‌ಗಳಲ್ಲಿನ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಆಗಸ್ಟ್ 1ರಂದುಕನ್ನಡ ಪರೀಕ್ಷೆ ನಡೆಯಲಿದೆ’ ಎಂದರು.

‘ವಿದೇಶ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜತೆಯಲ್ಲಿರುವ ಪೋಷಕರಿಗೆ 4 ದಿನಗಳ ಕಾಲ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ಸಿಇಟಿ ಕೌನ್ಸೆಲಿಂಗ್, ದಾಖಲೆಗಳ ಪರಿಶೀಲನೆ ಸೇರಿದಂತೆ ಎಲ್ಲ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಎಲ್ಲವನ್ನೂ ಮನೆಯಿಂದಲೇ ಮುಗಿಸಿ, ಅಂತಿಮವಾಗಿ ಆಯ್ಕೆ ಮಾಡಿಕೊಳ್ಳುವ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು’ ಎಂದರು.

ಪಿಜಿ-ಸಿಇಟಿ ಪರೀಕ್ಷೆ ಮುಂದೂಡಿಕೆ

‘ಅಂತಿಮ ವರ್ಷದ ಪರೀಕ್ಷೆಗಳು ನಡೆಯದ ಕಾರಣ ಪಿಜಿ-ಸಿಇಟಿ ಹಾಗೂ ಡಿಪ್ಲೊಮಾ-ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳು ಕ್ರಮವಾಗಿ ಆಗಸ್ಟ್ 8 ಮತ್ತು 9ರಂದು ನಡೆಯಬೇಕಾಗಿತ್ತು. ಅಂತಿಮ ವರ್ಷದ ಪರೀಕ್ಷೆಯ ನಂತರ ಈ ಬಗ್ಗೆ ನಿರ್ಧರಿಸಲಾಗುವುದು’ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಕೋವಿಡ್‌ ಇದ್ದರೂ ಪರೀಕ್ಷೆ ಬರೆಯುವ ಅವಕಾಶ

ಕೋವಿಡ್ ಇರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುತ್ತದೆ.

‘ಪಾಸಿಟಿವ್‌ ಇದ್ದವರಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುತ್ತದೆ. ಕೋವಿಡ್ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುವುದು. ಎಲ್ಲ ಕೇಂದ್ರಗಳ ಬಳಿ ಆಂಬುಲೆನ್ಸ್ ಸೇರಿದಂತೆ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ. ರಾಜ್ಯದಾದ್ಯಂತ ಕೆಎಸ್‌ಆರ್‌ಟಿಸಿ ಹಾಗೂ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಅಶ್ವತ್ಥನಾರಾಯಣ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT