ಸೋಮವಾರ, ಜೂನ್ 14, 2021
28 °C

ಸಿಇಟಿ: ಹೊರರಾಜ್ಯ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

CET exam

ಬೆಂಗಳೂರು: ಇದೇ ತಿಂಗಳ 30 ಮತ್ತು 31ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹೊರರಾಜ್ಯ ಮತ್ತು ಹೊರ ದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೋವಿಡ್‌ 19 ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವ ಕುರಿತಂತೆ ವಿವರವಾದ ಕಾರ್ಯಾಚರಣಾ ವಿಧಾನವನ್ನು (ಎಸ್‌ಓಪಿ) ಆರೋಗ್ಯ ಇಲಾಖೆ ಸೋಮವಾರ ಪ್ರಕಟಿಸಿದೆ.

ಹೊರರಾಜ್ಯ– ದೇಶದ ವಿದ್ಯಾರ್ಥಿಗಳು ಮತ್ತು ಅವರ ಜೊತೆಗಿರುವ ಸಹಾಯಕರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.

ಉಳಿದಂತೆ, ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಮಾಸ್ಕ್‌ ಧರಿಸುವುದು ಕಡ್ಡಾಯ. ಪರಿವೀಕ್ಷಕರು ಮತ್ತು ಮೇಲ್ವಿಚಾರಕರಿಗೆ ಕೈಗವಸು ಮತ್ತು ವೈದ್ಯಕೀಯ ಮಾಸ್ಕ್‌ ಒದಗಿಸಬೇಕು. ಯಾವುದೇ ಪರೀಕ್ಷಾ ಕೇಂದ್ರ ಕಂಟೈನ್‌ಮೆಂಟ್‌ ಪ್ರದೇಶದಲ್ಲಿ ಇರಬಾರದು. ಅಲ್ಲದೆ, ಕೇಂದ್ರವನ್ನು ಮೂರು ದಿನಗಳ ಮೊದಲು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗುಂಪುಗೂಡಲು ಅವಕಾಶ ನೀಡಬಾರದು.

ನೆಗಡಿ, ಜ್ವರ, ಗಂಟಲು ಕೆರೆತದಿಂದ ಬಳಲುತ್ತಿರುವ ಅಥವಾ ಕಂಟೈನ್‌ಮೆಂಟ್‌ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ಕಾದಿರಿಸಬೇಕು. ಪ್ರತಿ ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳಿರಬೇಕು ಎಂದೂ ಆರೋಗ್ಯ ಇಲಾಖೆ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು