ಬುಧವಾರ, ಆಗಸ್ಟ್ 4, 2021
23 °C

ಲಾಕ್‌ಡೌನ್‌ ಇದ್ದರೂ ಜನರ ಓಡಾಟ: ಬಿಎಸ್‌ವೈ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಘೋಷಿಸಿದ್ದರೂ ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಹಾದಿ–ಬೀದಿಯಲ್ಲಿ ಜನರ ಓಡಾಟ ಮತ್ತು ವಾಹನ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರಿದಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲೇ ಕುಳಿತು ಲಾಕ್‌ಡೌನ್‌ ಬಗ್ಗೆ ಅಧಿಕಾರಿಗಳು ಮತ್ತು ಮಾಧ್ಯಮಗಳಿಂದ ಮಾಹಿತಿ ಪಡೆದ ಅವರು, ಜನರ ಓಡಾಟ ಮತ್ತು ಅಧಿಕಾರಿಗಳ ಸಂಚಾರಕ್ಕೆ ಕಡಿವಾಣ ಹಾಕಲು ವಿಫಲರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ಅವರು ಧಾರವಾಡ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಆರಂಭವಾಗಿರುವ ಲಾಕ್‌ಡೌನ್‌ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ದಕ್ಷಿಣಕನ್ನಡದಲ್ಲಿ ನಾಳೆಯಿಂದ ಲಾಕ್‌ಡೌನ್‌ ಆಗಲಿದ್ದು, ಅಲ್ಲಿ ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ವಿಚಾರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು