ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾಂತ್ಯದಲ್ಲಿ ರಾಜ್ಯಕ್ಕೆ 1,279 ವೆಂಟಿಲೇಟರ್: ಬಿ.ಎಸ್. ಯಡಿಯೂರಪ್ಪ

Last Updated 4 ಆಗಸ್ಟ್ 2020, 10:26 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ 1,279 ವೆಂಟಿಲೇಟರ್‌ಗಳು ತಿಂಗಳಾಂತ್ಯದಲ್ಲಿ ಲಭ್ಯವಾಗಲಿದ್ದು, ಈ ವೆಂಟಿಲೇಟರ್‌ಗಳನ್ನು ತಕ್ಷಣವೇ ಅಳವಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚಿಸಿದರು.

ಕೋವಿಡ್ ದೃಢಪಟ್ಟ ಕಾರಣಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ, ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವ ಕುರಿತಂತೆ ದೂರವಾಣಿ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕೇಂದ್ರ ಸರ್ಕಾರದ ಪಿ.ಎಂ. ಕೇರ್ಸ್ ನಿಧಿಯಲ್ಲಿ ರಾಜ್ಯಕ್ಕೆ ಈಗಾಗಲೇ 681 ವೆಂಟಿಲೇಟರ್‌ಗಳು ದೊರಕಿವೆ. ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ 166 ಸೇರಿದಂತೆ ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳ ಸಂಖ್ಯೆಯನ್ನು ಒಟ್ಟು 335ಕ್ಕೆ ಹೆಚ್ಚಿಸಲಾಗಿದೆ. ವಾರಾಂತ್ಯದಲ್ಲಿ ಉಳಿದ 346 ವೆಂಟಿಲೇಟರ್‌ಳನ್ನು ಅಳವಡಿಸಲಾಗುವುದು. ಆಸ್ಪತ್ರೆಯ ಸಿಬ್ಬಂದಿ ಈ ವೆಂಟಿಲೇಟರ್‌ಗಳನ್ನು ಬಳಸಬೇಕು ಎಂದು ಸೂಚಿಸಿದರು.

ಅನೆಸ್ಥಿಟಿಕ್‌, ಪಾರಾ ಮೆಡಿಕಲ್ ಸಿಬ್ಬಂದಿಯನ್ನು ತಕ್ಷಣವೇ ನೇಮಕ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ವೆಂಟಿಲೇಟರ್‌ಗಳನ್ನು ಒದಗಿಸುವಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಾಡಿರುವ ಮನವಿಯನ್ನು ಪರಿಗಣಿಸಬೇಕು. ಕೋವಿಡ್ 19 ಸಂಬಂಧ ತಾತ್ಕಾಲಿಕವಾಗಿ ಒದಗಿಸಲು ಷರತ್ತು ಮತ್ತು ನಿಯಮಗಳ ಬಗ್ಗೆ ತೀರ್ಮಾನಿಸಬೇಕು ಎಂದೂ ಅಧಿಕಾರಿಗಳಿಗೆ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT