ಬೆಂಗಳೂರು: ಆಗಸ್ಟ್ 1ರಂದು ನಿಗದಿಯಾಗಿದ್ದ 'ಕಾಮೆಡ್–ಕೆ ಯುಜಿಇಟಿ 2020' ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.

ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಆಗಸ್ಟ್ 1ರಂದು ಬೆಳಿಗ್ಗೆ 9ರಿಂದ 12 ಹಾಗೂ ಮಧ್ಯಾಹ್ನ 2ರಿಂದ 5ರವರೆಗೆ ಕಾಮೆಡ್–ಕೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ನಿಗದಿಯಂತೆ ಪರೀಕ್ಷೆ ನಡೆಸುವುದು ಸಾಧ್ಯವಾಗುವುದಿಲ್ಲ ಎಂದು ಕಾಮೆಡ್–ಕೆ ಅಭಿಪ್ರಾಯ ಪಟ್ಟಿದೆ.

ಕೆಲವು ರಾಜ್ಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಿದೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಕರ್ನಾಟಕದಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ಪರೀಕ್ಷೆ ಮುಂದೂಡಲು ನಿರ್ಧರಿಸಲಾಗಿದೆ. ಪರೀಕ್ಷೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಕಾಮೆಡ್–ಕೆ ತಿಳಿಸಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ www.comedk.org ಗಮನಿಸುತ್ತಿರುವಂತೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.