ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update| 3,649 ಹೊಸ ಕೋವಿಡ್‌ ಪ್ರಕರಣ ದೃಢ, 61 ಸಾವು

ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಾದ್ಯಂತ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5 ಗಂಟೆವರೆಗೆ 3,649 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 61 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1714 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 22 ಮಂದಿ ಕೊನೆಯುಸಿರೆಳೆದಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 71,069 ಮಂದಿಗೆ ಸೋಂಕು ತಗಲಿದ್ದು,1464 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 25,459 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 44,140 ಸಕ್ರಿಯ ಪ್ರಕರಣಗಳು ಇವೆ

ಇಂದು ಒಂದೇ ದಿನದಲ್ಲಿ 43,904 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 10,64,734 ಪರೀಕ್ಷೆ‌ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT