ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಜೂನ್‌ನಲ್ಲಿ 10 ಸಾವಿರ, ಜುಲೈಗೆ ಲಕ್ಷ !

Last Updated 27 ಜುಲೈ 2020, 17:52 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು:ರಾಜ್ಯದಲ್ಲಿ ಒಂದು ತಿಂಗಳ ಅಂತರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರದಿಂದ ಒಂದು ಲಕ್ಷಕ್ಕೆ ಏರಿದೆ. 5,324 ಮಂದಿಗೆ ಸೋಮವಾರ ಸೋಂಕು ದೃಢಪಡುವ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,01,465ಕ್ಕೆ ಏರಿದೆ.

ಕೋವಿಡ್‌ ‍ಪೀಡಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ಹಾಗೂ ತಮಿಳುನಾಡಿನ ನಂತರದ ಸ್ಥಾನದಲ್ಲಿ ರಾಜ್ಯ ಇದೆ. ಬೆಂಗಳೂರು ನಗರದಲ್ಲಿ 1,470 ಮಂದಿಗೆ ಸೋಮವಾರ ಸೋಂಕು ಕಾಣಿಸಿಕೊಂಡಿದೆ. ಬಳ್ಳಾರಿಯಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಒಂದೇ ದಿನ 840 ಮಂದಿಯಲ್ಲಿ ಕಾಯಿಲೆ ಪತ್ತೆಯಾಗಿದೆ. ಮೈಸೂರಿನಲ್ಲಿಯೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 296 ಮಂದಿಯಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದ್ದು, 225 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 199 ಮಂದಿಗೆ ಕೋವಿಡ್–19 ದೃಢಪಟ್ಟಿದೆ.

1,847 ಮಂದಿ ಗುಣಮುಖ: ಗುಣಮುಖರಾದವರ ಸಂಖ್ಯೆಯೂ ಏರುತ್ತಿದೆ. ಜುಲೈ 27ರಂದು 1,847 ಮಂದಿ ಗುಣಮುಖರಾಗುವ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮುಕ್ತರಾದವರ ಸಂಖ್ಯೆ 37,685ಕ್ಕೆ ಏರಿದೆ.

ಸಾವಿನ ಸಂಖ್ಯೆ 2 ಸಾವಿರ ಸಮೀಪಕ್ಕೆ: ಕೋವಿಡ್‌–19ನಿಂದ 75 ಜನರು ಸಾವಿಗೀಡಾಗುವ ಮೂಲಕ ರಾಜ್ಯದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 1,953ಕ್ಕೆ ತಲುಪಿದೆ.

ಬೆಂಗಳೂರು ನಗರದಲ್ಲಿ 26, ದಕ್ಷಿಣ ಕನ್ನಡ 9, ಧಾರವಾಡದಲ್ಲಿ 8, ಬೆಳಗಾವಿಯಲ್ಲಿ 6 ಜನರು ಮೃತಪಟ್ಟಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 598 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಸೋಂಕಿತರಲ್ಲಿ ಮತ್ತೆ 75 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದ್ದು, ಕೋವಿಡ್‌ನಿಂದ ಸತ್ತವರ ಸಂಖ್ಯೆ 1,953ಕ್ಕೆ ಏರಿಕೆಯಾಗಿವೆ. ಇಂದು ಒಂದೇ ದಿನ 5,324 ಪ್ರಕರಣಗಳು ದಾಖಲಾಗಿದ್ದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 61,819 ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್‌ 8ರಂದು ರಾಜ್ಯದಲ್ಲಿ ಕಾಣಿಸಿಕೊಂಡ ಕೋವಿಡ್, ಸೋಮವಾರ (ಜುಲೈ 27)ಕ್ಕೆ ಒಂದು ಲಕ್ಷದ ಗಡಿ ದಾಟಿದೆ.

ರಾಜ್ಯದಲ್ಲಿ 1847 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 37,685ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ ಒಂದೇ ದಿನ 1470 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿವೆ. 784 ಮಂದಿ ಗುಣಮುಖರಾಗಿದ್ದು, 26 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.

ಒಂದೇ ದಿನ ಬಳ್ಳಾರಿಯಲ್ಲಿ 840, ಕಲಬುರ್ಗಿಯಲ್ಲಿ 631, ಮೈಸೂರಿನಲ್ಲಿ 296, ಉಡುಪಿಯಲ್ಲಿ 225, ಧಾರವಾಡದಲ್ಲಿ 193, ಬೆಳಗಾವಿ 155, ಕೋಲಾರ 143, ಬೆಂಗಳೂರು ಗ್ರಾಮಾಂತರದಲ್ಲಿ 138 ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕಡಿಮೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT