ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್‌ ವೈದ್ಯರ ವೇತನ ತಾರತಮ್ಯ ಸರಿಪಡಿಸಿ: ಕುಮಾರಸ್ವಾಮಿ

Last Updated 17 ಜುಲೈ 2020, 10:09 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಗುತ್ತಿಗೆ ಆಯುಷ್‌ ವೈದ್ಯರ ವೇತನ ತಾರತಮ್ಯವನ್ನು ಸರಿಪಡಿಸಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ಸುಮಾರು 2 ಸಾವಿರ ಸರ್ಕಾರಿ ಗುತ್ತಿಗೆ ವೈದ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವೈದ್ಯರ ಜತೆ ಮಾತುಕತೆ ನಡೆಸಿ ಬಿಕಟ್ಟು ಪರಿಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್‌ ವೈದ್ಯರಿಗೆ ಮಾಸಿಕ ₹20,000 ಮತ್ತು ಅಲೋಪತಿ ವೈದ್ಯರಿಗೆ ಮಾಸಿಕ ₹60,000 ವೇತನ ನೀಡುತ್ತಿರುವುದು ತಾರತಮ್ಯ ಎಂದು ಆಯುಷ್‌ ವೈದ್ಯರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿದೆ. ರಾಜ್ಯ ಸರ್ಕಾರ ಆಯುಷ್‌ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನವೊಲಿಸಬೇಕು ಎಂದು ಅವರು ಹೇಳಿದ್ದಾರೆ.

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆಗೇಡಿತನ ಪ್ರದರ್ಶಿಸಬಾರದು. ಆಯುಷ್‌ ಮತ್ತು ಅಲೋಪತಿ ವೈದ್ಯರ ವೇತನ ತಾರತಮ್ಯ ಸಹಜವಾಗಿ ಕಂದಕ ಸೃಷ್ಟಿಸಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ. ಸಮಸ್ಯೆ ಬಿಗಡಾಯಿಸುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT