ಬೆಂಗಳೂರು: 'ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಗಳನ್ನು ಅಂತಿಮಗೊಳಿಸಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿದ್ದೇನೆ. ಈ ಶೈಕ್ಷಣಿಕ ವರ್ಷ ಆರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟ. ಹೀಗಾಗಿ, ಪಠ್ಯಕ್ರಮ ಅಂತಿಮಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿ ಇರಲಿದೆ. ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹೀಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ’ ಎಂದಿದ್ದಾರೆ.

ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹ ಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಿ ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗೆ ಅನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ ಪಠ್ಯಾಂಶಗಳನ್ನು ಪ್ರಕಟಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.

‘ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸ ಮಾಡುವುದಿಲ್ಲ. ಇದು ಅನಾವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ’ ಎಂದೂ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.