ಗುರುವಾರ , ಆಗಸ್ಟ್ 5, 2021
23 °C

ಆರೋಗ್ಯವಾಣಿ ಸಿಬ್ಬಂದಿಗೆ ಸೋಂಕು: ಕೆಲಸಗಾರರಲ್ಲಿ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದದ ಐ.ಟಿ ಪಾರ್ಕ್‌ನಲ್ಲಿರುವ ‘ಆರೋಗ್ಯವಾಣಿ’ ಸಹಾಯವಾಣಿ 104 ಕಾಲ್‌ ಸೆಂಟರ್‌ನಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಅಲ್ಲಿರುವ 250ಕ್ಕೂ ಹೆಚ್ಚು ಸಿಬ್ಬಂದಿ ಆತಂಕಕ್ಕೀಡಾಗಿದ್ದಾರೆ.

ಮಹಿಳೆಗೆ ಜುಲೈ 10ರಂದು ಜ್ವರ ಕಾಣಿಸಿಕೊಂಡಿತ್ತು. ಬಳಿಕ, ತಮ್ಮ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. 12ರಂದು ಸೋಂಕು ದೃಢಪಟ್ಟಿದ್ದು, ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

15 ಮಂದಿ ಕ್ವಾರಂಟೈನ್: ‘ಸಿಬ್ಬಂದಿಯೊಬ್ಬರಿಗೆ ಕೋವಿಡ್ಕೊ–19 ದೃಢಪಟ್ಟಿರುವುದನ್ನು ಜಿಲ್ಲಾಡಳಿತಕ್ಕೆ ತಿಳಿಸಿದ್ದೇವೆ. ಅವರ ಜತೆ ಕೆಲಸ ಮಾಡುತ್ತಿದ್ದ 15 ಸಿಬ್ಬಂದಿಗೆ ಹೋಂ ಕ್ವಾರಂಟೈನ್‌ನಲ್ಲಿರುವಂತೆ ತಿಳಿಸಿದ್ದೇವೆ. ಮೂವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಕಚೇರಿಯನ್ನು ನಿತ್ಯ ಸ್ಯಾನಿಟೈಸ್‌ ಮಾಡಲಾಗುತ್ತಿದೆ’ ಎಂದು ಹೆಸರು ಹೇಳಲು ಇಚ್ಛಿಸಿದ ಕಚೇರಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಚೇರಿಯನ್ನು ಸೀಲ್‌ಡೌನ್ ಮಾಡುವಂತಹ ಸ್ಥಿತಿ ಇಲ್ಲ. ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕೆಲಸ ನಿರ್ವಹಿಸಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ ತಿಳಿಸಿದರು.

ಕೆಲಸದಿಂದ ತೆಗೆಯುವ ಬೆದರಿಕೆ: ‘ಸಹೋದ್ಯೋಗಿಗೆ ಕೋವಿಡ್ ದೃಢಪಟ್ಟಿದ್ದರೂ ಕೆಲಸಕ್ಕೆ ಗೈರು ಹಾಜರಾದರೆ ಕೆಲಸದಿಂದ ತೆಗೆಯಲಾಗುವುದು ಎಂದು ಬೆದರಿಸುತ್ತಿದ್ದಾರೆ. ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿಲ್ಲ’ ಎಂದು ಆರೋಗ್ಯವಾಣಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು