ಮಂಗಳವಾರ, ಸೆಪ್ಟೆಂಬರ್ 29, 2020
28 °C

Covid-19 Karnataka Update| ಒಂದೇದಿನ 6,259 ಪ್ರಕರಣಗಳು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5ರ ವರೆಗೆ ಒಟ್ಟು 6,259 ಕೋವಿಡ್‌–19 ಸೋಂಕು ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 110 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,704ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 6,777 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಚೇತರಿಸಿಕೊಂಡವರ ಸಂಖ್ಯೆ 69,272ಕ್ಕೆ ಹೆಚ್ಚಾಗಿದೆ. ಇನ್ನೂ 73,846 ಪ್ರಕರಣಗಳು ಸಕ್ರಿಯವಾಗಿವೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೋವಿಡ್‌–19 ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2,035 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 63,033ಕ್ಕೆ ಏರಿಕೆಯಾಗಿದೆ. ಇದರಲ್ಲಿ 27,877 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 34,021 ಪ್ರಕರಣಗಳು ಸಕ್ರಿಯವಾಗಿವೆ.

ಉಳಿದಂತೆ ಮೈಸೂರಿನಲ್ಲಿ 662, ಕಲಬುರ್ಗಿಯಲ್ಲಿ 285, ಬಳ್ಳಾರಿಯಲ್ಲಿ 284, ಬೆಳಗಾವಿಯಲ್ಲಿ 263, ದಕ್ಷಿಣ ಕನ್ನಡದಲ್ಲಿ 225, ದಾವಣಗೆರೆಯಲ್ಲಿ 191 ಪ್ರಕರಣಗಳು ವರದಿಯಾಗಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು