ಮಂಗಳವಾರ, ಜುಲೈ 27, 2021
21 °C

Covid-19 Karnataka Update| 4120 ಸೋಂಕು ಪ್ರಕರಣ: 91 ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 4120 ಕೊರೊನಾ ಕೋವಿಡ್‌–19 ಪ್ರಕರಣಗಳು ಪತ್ತೆಯಾಗಿವೆ. ಇದರ ಜೊತೆಗೆ 91 ಮಂದಿ ಇಂದು ಕೊರೊನಾ ವೈರಸ್‌ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಟ್ಟು 2156 ಪ್ರಕರಣಗಳು ದೃಢಪಟ್ಟಿವೆ. ಇದೇ ವೇಳೆ 36 ಮಂದಿ ಕೊನೆಯುಸಿರೆಳೆದಿದ್ದಾರೆ. 

ಇಂದು ರಾಜ್ಯದಾದ್ಯಂತ 1290 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂಬುದು ಸರ್ಕಾರ ಬಿಡುಗಡೆ ಮಾಡಿರುವ ಬುಲೆಟಿನ್‌ನಿಂದ ಗೊತ್ತಾಗಿದೆ. 

ಸದ್ಯ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 63772 ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಸಕ್ರಿಯವಾಗಿರುವುದು 39370 ಪ್ರಕರಣಗಳು ಮಾತ್ರ. 23065 ಮಂದಿ ಈ ವರೆಗೆ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1331 ಮಂದಿ ಇಲ್ಲಿಯ ವರೆಗೆ ಮೃತಪಟ್ಟವರಾಗಿದ್ದಾರೆ.  

ರಾಜ್ಯದಲ್ಲಿ ಸದ್ಯ 579 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಿಲ್ಲಾವಾರು ಮಾಹಿತಿ ‌

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು