ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update| 5030 ಕೋವಿಡ್‌ ಪ್ರಕರಣಗಳು ಪತ್ತೆ: 97 ಮಂದಿ ಸಾವು 

Last Updated 23 ಜುಲೈ 2020, 15:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 5030 ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80863ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಇಂದು ಒಟ್ಟು 97 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ವರೆಗೆ ಕೊರೊನಾ ವೈರಸ್‌ ಸೋಂಕಿಗೆ ಪ್ರಾಣತೆತ್ತವರ ಸಂಖ್ಯೆ 1616ಕ್ಕೆ ಏರಿದೆ.

ಇನ್ನು ಬೆಂಗಳೂರಿನಲ್ಲಿ ಇಂದು 2207 ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ ಗುರುವಾರದ ಹೊತ್ತಿಗೆ 39200 ಆಗಿದೆ.

ಒಟ್ಟಾರೆ 80863 ಸೋಂಕು ಪ್ರಕರಣಗಳಲ್ಲಿ ಸದ್ಯ ರಾಜ್ಯದಲ್ಲಿ ಸಕ್ರೀಯವಾಗಿರುವುದು 49931 ಪ್ರಕರಣಗಳು ಮಾತ್ರ. ಇನ್ನುಳಿದಂತೆ 29310 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 2071 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT