ಸೋಮವಾರ, ಸೆಪ್ಟೆಂಬರ್ 20, 2021
22 °C

Covid-19 Karnataka Update| ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ಹಲವು ದಿನಗಳಿಂದ ದಿನವೊಂದರಲ್ಲಿ 5 ಸಾವಿರ ಮೀರಿದ ಪ್ರಕರಣಗಳನ್ನು ನೋಡುತ್ತಿದ್ದ ಕರ್ನಾಟಕದಲ್ಲಿ ಸೋಮವಾರ 4752 ಪ್ರಕರಣಗಳು ಕಂಡು ಬಂದಿವೆ. 

ರಾಜ್ಯದಲ್ಲಿ ಸೋಮವಾರ 4776 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಸೋಂಕು ದೃಢಪಟ್ಟಿವರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. 

ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 98 ಕೋವಿಡ್ ಪೀಡಿತರು ಮರಣ ಹೊಂದಿದ್ದಾರೆ. ಈ ಮೂಲಕ ಈ ವರೆಗಿನ ಸಾವಿನ ಸಂಖ್ಯೆ 2595ಕ್ಕೆ ಏರಿದೆ. 

ಅಲ್ಲದೆ, ಸೋಮವಾರದ ಹೊತ್ತಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 13,9571 ಕ್ಕೆ ಮುಟ್ಟಿದೆ. 

ಬೆಂಗಳೂರಿನಲ್ಲಿ ಸೋಮವಾರ 1497 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 60,998ಕ್ಕೆ ಏರಿದೆ. 

ಭಾನುವಾರ ಒಂದೇ ದಿನ ರಾಜ್ಯದಲ್ಲಿ 5,532 ಪ್ರಕರಣಗಳು ಪತ್ತೆಯಾಗಿದ್ದವು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು