ಮಂಗಳವಾರ, ಸೆಪ್ಟೆಂಬರ್ 21, 2021
23 °C

ಕೋವಿಡ್–19 | ಆಗಸ್ಟ್ 31ರ ವರೆಗೆ ಶಾಲೆ ತೆರೆಯದಂತೆ ಶಿಕ್ಷಣ ಇಲಾಖೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಕೋವಿಡ್–19 ಸೋಂಕು ಪ್ರಕರಗಳು ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ–ಕಾಲೇಜುಗಳನ್ನು ಈ ತಿಂಗಳ (ಆಗಸ್ಟ್‌) 31ರ ವರೆಗೆ ತೆರೆಯುವಂತಿಲ್ಲ ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಲಾಗಿದೆ. ಅದರಲ್ಲಿ, ‘ಈ ಹಿಂದೆ ಜುಲೈ 31ರ ವರೆಗೆ ಶಾಲಾ–ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರವು ಶಾಲೆಗಳು, ಕಾಲೇಜುಗಳು ಮತ್ತು ತರಬೇತಿ ಸಂಸ್ಥೆಗಳನ್ನು ಆಗಸ್ಟ್‌ 31ರ ವರೆಗೆ ಮುಚ್ಚುವಂತೆ ಆದೇಶ ನೀಡಿರುವುದರಿಂದ ಸರ್ಕಾರಿ ಶಾಲೆಗಳು, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳನ್ನು ಮುಚ್ಚಿರತಕ್ಕದ್ದು’ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು