ಗುರುವಾರ , ಆಗಸ್ಟ್ 5, 2021
27 °C

ಕೋವಿಡ್‌: ಇಂದಿನಿಂದ ಬಿಜೆಪಿ ಜನ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಲು ಬಿಜೆಪಿ ರಾಜ್ಯ ಘಟಕ ಶುಕ್ರವಾರದಿಂದ ಒಂದು ವಾರದ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಗುರುವಾರ ಈ ಸಂಬಂಧ ವಿವಿಧ ಜಿಲ್ಲೆಗಳ ಬಿಜೆಪಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಆರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಬೂತ್‌ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು. ಮಾಸ್ಕ್ ಧರಿಸುವುದು, ಮನೆ ಬಿಟ್ಟು ಹೊರಗೆ ಬರಬಾರದು, ಅಂತರ ಕಾಯ್ದುಕೊಳ್ಳುವುದು, ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳುವುದು, ಅದಕ್ಕಾಗಿ ಕಷಾಯದ ಜತೆ ಬಿಸಿ ನೀರು ಸೇವನೆ ಹಾಗೂ ವ್ಯಕ್ತಿ, ವಸ್ತುಗಳನ್ನು ಮುಟ್ಟದಂತೆ ಮನವಿ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು