ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಆಗ್ರಹ

Last Updated 31 ಜುಲೈ 2020, 11:34 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್‌ ನಿರ್ವಹಣೆಗಾಗಿ ವೈದ್ಯಕೀಯ ಮತ್ತು ಸುರಕ್ಷಾ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ ನಡೆಸಿದ್ದು, ಸತ್ಯಾಸತ್ಯತೆ ಬಹಿರಂಗಕ್ಕೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಶಾಸಕ ಎಚ್‌.ಕೆ.ಪಾಟೀಲ ಆಗ್ರಹಿಸಿದರು.

‌ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖಾ ಆಯೋಗ ರಚನೆಯಾಗಬೇಕು. ಇಲ್ಲವಾದರೆ ಕಾಂಗ್ರೆಸ್‌ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಪಿಪಿಇ ಕಿಟ್‌, ಮಾಸ್ಕ್, ಸ್ಯಾನಿಟೈಜರ್‌, ವೆಂಟಿಲೇಟರ್‌ ಮತ್ತಿತರರ ವೈದ್ಯಕೀಯ ಮತ್ತು ಸುರಕ್ಷಾ ಉಪರಕಣಗಳ ಖರೀದಿಯಲ್ಲಿ ₹2 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ. ಈ ಬಗ್ಗೆ ಪುರಾವಣೆಗಳಿವೆ ಎಂದು ಹೇಳಿದರು.

ಕೋವಿಡ್‌ ನಿರ್ವಹಣೆ ಸಂಬಂಧ ಸರ್ಕಾರ ಇದುವರೆಗೆ ಮಾಡಿರುವ ಖರ್ಚು ವೆಚ್ಚದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ತಪ್ಪಿತಸ್ಥ ಸಚಿವರು, ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT