ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಲಾಕ್‌ಡೌನ್ | ಪರಿಹಾರ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಕ್‌ಡೌನ್‌– ಸಾಂದರ್ಭಿಕ ಚಿತ್ರ

ಹೊನ್ನಾವರ (ಉತ್ತರ ಕನ್ನಡ): ‘ಲಾಕ್‌ಡೌನ್ ಕಾರಣ ನಷ್ಟ ಅನುಭವಿಸಿರುವ ಸವಿತಾ ಸಮಾಜದ ವೃತ್ತಿ ನಿರತರು, ಮಡಿವಾಳ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಅಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ’ ಎಂದು ಕಾರ್ಮಿಕ ಹಾಗೂ ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.

ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಪರಿಹಾರ ಕೋರಿ 1.51 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಅಧಿಕೃತ ಮಾಹಿತಿ ಸರ್ಕಾರದ ಬಳಿ ಇಲ್ಲದಿರುವುದು ಪರಿಹಾರ ನೀಡಲು ತೊಡಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳೀಕರಣ ಮಾಡಲಾಗಿದ್ದು, ಅರ್ಜಿಯ ಜತೆ ಆಧಾರ್ ಹಾಗೂ ಬ್ಯಾಂಕ್‌ ಖಾತೆ ವಿವರ ನೀಡಿದರೆ ಸಾಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು