ಸೋಮವಾರ, ಸೆಪ್ಟೆಂಬರ್ 28, 2020
27 °C

ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯೊಬ್ಬರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಯಿತು

ಹಾವೇರಿ: ಕೊರೊನಾ ಸೋಂಕಿತ ಇಬ್ಬರು ಗರ್ಭಿಣಿಯರಿಗೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ವೈದ್ಯರು ಭಾನುವಾರ ಯಶಸ್ವಿಯಾಗಿ ಹೆರಿಗೆ ಮಾಡಿಸಿದರು. 

ಕೋವಿಡ್‌ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಬಂಕಾಪುರ ಪಟ್ಟಣದ 21 ವರ್ಷದ ಗರ್ಭಿಣಿ ಮತ್ತು ಸವಣೂರು ಪಟ್ಟಣದ 25 ವರ್ಷದ ಗರ್ಭಿಣಿಗೆ ಹೆರಿಗೆಯಾಯಿತು. ಹೆಣ್ಣು ಮತ್ತು ಗಂಡು ಎರಡೂ ನವಜಾತ ಶಿಶುಗಳು ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಇಬ್ಬರೂ ಮಹಿಳೆಯರಿಗೆ ಜುಲೈ 29ರಂದು ಸೋಂಕು ದೃಢಪಟ್ಟಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು