ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಶಾ’ ಬೇಡಿಕೆಗೆ ಸ್ಪಂದಿಸದಿದ್ದರೆ ಸಿಎಂ ಮನೆಗೆ ಮುತ್ತಿಗೆ: ಡಿ.ಕೆ. ಶಿವಕುಮಾರ್

Last Updated 21 ಜುಲೈ 2020, 17:58 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಬೇಕಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

ನೆಲಮಂಗಲದಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಶಿವಕುಮಾರ್ ಮಂಗಳವಾರ ಭೇಟಿ ಮಾಡಿ ಚರ್ಚಿಸಿದರು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಅವರ ಜತೆ ಇದ್ದರು.

‘ಆಶಾ ಕಾರ್ಯಕರ್ತೆಯರು 12 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರದ ಯಾವುದೇ ಸಚಿವರೂ ಅವರ ಅಹವಾಲು ಆಲಿಸಿಲ್ಲ. ಮುಂದಿನ ಮೂರು ದಿನಗಳೊಳಗೆ ಸ್ಪಂದಿಸದಿದ್ದರೆ ಅವರ ಬೆಂಬಲಕ್ಕೆ ನಿಂತು ಬೆಂಗಳೂರು ಚಲೋ ಚಳವಳಿ ನಡೆಸಿ, ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುವುದು ಅನಿವಾರ್ಯವಾಗುತ್ತದೆ’ ಎಂದರು.

‘ಕೊರೊನಾ ಸಂದರ್ಭದಲ್ಲಿ ಈ ಹೆಣ್ಣು ಮಕ್ಕಳು ತಮ್ಮ ಜೀವವನ್ನೇ ಪಣಕ್ಕಿಟ್ಟು, ಎರಡು ಬಾರಿ ಪ್ರತಿ ಮನೆಗೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಕೊಟ್ಟಿದ್ದಾರೆ. ಯಡಿಯೂರಪ್ಪನವರೇ, ಇವರು ಕೂಡ ನಿಮ್ಮ ಅಕ್ಕ- ತಂಗಿಯರಿದ್ದಂತೆ. ನಿಮ್ಮ ಸಚಿವರನ್ನು ಕರೆದು ಚರ್ಚಿಸಿ ಇವರ ಬೇಡಿಕೆ ಈಡೇರಿಸಿ’ ಎಂದು ಒತ್ತಾಯಿಸಿದರು.

‘ಆರೋಗ್ಯ ಹಸ್ತ’ಕ್ಕೆ ಡಿಕೆಶಿ ಚಾಲನೆ

ಕೆಪಿಸಿಸಿ ವೈದ್ಯ ಘಟಕ ಹಮ್ಮಿಕೊಂಡಿರುವ ಕೋವಿಡ್ ನಿರ್ವಹಣೆ ಪಡೆಯ ‘ಆರೋಗ್ಯ ಹಸ್ತ’ ತರಬೇತಿ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಚಾಲನೆ ನೀಡಿದರು.

‘ಈ ಕಾರ್ಯಕ್ರಮವನ್ನು ಮುಂದಿನ ಕೆಲವು ದಿನ ಬೇರೆ ಬೇರೆ ಕಡೆ ಹಮ್ಮಿಕೊಂಡು ಬಳಿಕ ಎಲ್ಲ ಪಂಚಾಯಿತಿಗಳಿಗೆ ತೆರಳಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಆಕ್ಸಿಪಲ್ಸ್‌ ಮೀಟರ್ ಮೂಲಕ ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಲಾಗುವುದು. ಅಗತ್ಯವಿದ್ದರೆ ಅವರಿಗೆ ಪರೀಕ್ಷೆ ಮಾಡಿಸಲು ಸಲಹೆ ನೀಡಲಾಗುವುದು’ ಎಂದರು. ‘ಕಾರ್ಯಕ್ರಮದಲ್ಲಿ ಭಾಗಿಯಾಗುವ ಕಾರ್ಯಕರ್ತರಿಗೆ ಸುರಕ್ಷತಾ ಸಲಕರಣೆ ನೀಡಲಾಗುತ್ತದೆ. ಜತೆಗೆ ವಿಮೆ ಮಾಡಿಸಲಾಗುತ್ತಿದೆ. ಪಕ್ಷದ ವತಿಯಿಂದ ಇದೊಂದು ದೊಡ್ಡ ಮಟ್ಟದ ಸೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT